ಸೋಮವಾರಪೇಟೆ, ಜು. ೧: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹೆಬ್ಬಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಿಕ್ಷಣ ಇಲಾಖೆಯ ಸಿಆರ್‌ಪಿ ಆದರ್ಶ್ ಅವರು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ಪ್ರತಿ ಮಗುವೂ ಒಂದೊAದು ಗಿಡವನ್ನು ನೆಟ್ಟು ಅದನ್ನು ಪೋಷಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಯೋಜನೆಯ ಹೆಬ್ಬಾಲೆ ವಲಯ ಮೇಲ್ವಿಚಾರಕ ಸುಧಾಕರ್, ಶಾಲಾ ಶಿಕ್ಷಕರಾದ ಜಾನಕಿ, ರಮೇಶ್, ಪುಷ್ಪ, ಭವಿತಾ, ಒಕ್ಕೂಟದ ಪದಾಧಿಕಾರಿ ಸವಿತಾ, ಕೃಷಿ ಮೇಲ್ವಿಚಾರಕ ರಾಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.