ಮಡಿಕೇರಿ, ಜು. ೨: ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ರಕ್ಷಣಾ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆಯು ತಾಲೂಕಿನ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಅವರ ನೇತೃತ್ವದಲ್ಲಿ ನಡೆಯಿತು.
ಜಿಲ್ಲಾಡಳಿತ, ಎನ್ಡಿಆರ್ಎಫ್, ಪೊಲೀಸ್ ಮತ್ತು ಅಗ್ನಿಶಾಮಕ, ಗೃಹರಕ್ಷಕ ದಳ ಹೀಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಅಣಕು ಪ್ರದರ್ಶನ’ ಪ್ರಾತ್ಯಕ್ಷಿಕೆ ನಡೆಯಿತು. ಭೂಕುಸಿತ, ಪ್ರವಾಹ ಮತ್ತಿತರ ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಂತಹ ಸ್ಥಳದಲ್ಲಿ ವಿದ್ಯುತ್ ಕಡಿತಗೊಳಿಸುವುದು, ಘಟನಾ ಸ್ಥಳವನ್ನು ಸೀಲ್ ಮಾಡುವುದು, ಬಳಿಕ ರಕ್ಷಣಾ ಕಾರ್ಯ ಕೈಗೊಂಡು ಪ್ರಥಮ ಚಿಕಿತ್ಸೆ ನೀಡುವುದು, ಗಂಭೀರ ಗಾಯವಾಗಿದ್ದಲ್ಲಿ ಆಸ್ಪತ್ರೆಗೆ ಕರೆದೊಯ್ಯುವುದು. ಹೀಗೆ ೯ಕ್ಕೂ ಹೆಚ್ಚು ರೀತಿಯ ಅಣಕು ಪ್ರದರ್ಶನ ಜರುಗಿತು.
ಅಣಕು ಪ್ರದರ್ಶನದಲ್ಲಿ ಎನ್ಡಿಆರ್ಎಫ್, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ದಳ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಯವರು ಕೈಜೋಡಿಸಿದರು.
ಹೆಚ್ಚಿನ ಮಳೆಯಿಂದ ಪ್ರವಾಹ, ಭೂಕುಸಿತ ಹೀಗೆ ವಿವಿಧ ರೀತಿಯ ಅತಿವೃಷ್ಟಿ ಉಂಟಾದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು.
ಅಣಕು ಕಾರ್ಯಾಚರಣೆಯಲ್ಲಿ ಎನ್ಡಿಆರ್ಎಫ್ ತಂಡದ ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದಲ್ಲಿ ೨೩ ಮಂದಿ, ಪೊಲೀಸ್ ಇಲಾಖೆಯಿಂದ ಡಿಎಆರ್ ತಂಡದ ಆರ್ಪಿಐ ಚೆನ್ನನಾಯಕ ನೇತೃತ್ವದಲ್ಲಿ ೧೫ ಜನ ಪೊಲೀಸರು, ಅಗ್ನಿಶಾಮಕ ಇಲಾಖೆಯಿಂದ ನಾಗರಾಜು ನೇತೃತ್ವದಲ್ಲಿ ೮ ಮಂದಿ, ಗೃಹರಕ್ಷಕ ದಳ ವಿಭಾಗದಿಂದ ಅಕ್ಷಯ್ ಅವರ ನೇತೃತ್ವದ ೮ ಮಂದಿ ಸಿಬ್ಬಂದಿಗಳು, ಒಟ್ಟು ೫೪ ಸಿಬ್ಬಂದಿಗಳು ಅಣಕು ಪ್ರದರ್ಶನದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ಬಳಿಕ ಜಿಲ್ಲಾಧಿಕಾರಿ ವೆಂಕಟ ರಾಜ ಅವರು ಮಾತನಾಡಿ, ಜಿಲ್ಲಾಡಳಿತದ ಸಹಯೋಗದಲ್ಲಿ ಎನ್ಡಿಆರ್ಎಫ್, ಪೊಲೀಸ್, ಗೃಹರಕ್ಷಕ ದಳ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ೨೦೧೮, ೨೦೧೯, ೨೦೨೦ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ತುಂಬಾ ತೊಂದರೆ ಆಗಿತ್ತು. ಆ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅಣಕು ಪ್ರದರ್ಶನದಿಂದ ಮಾಹಿತಿ ನೀಡಲಾಗಿದೆ ಎಂದರು.
ಪ್ರವಾಹ, ಭೂಕುಸಿತ ಮತ್ತಿತರ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಹೇಗೆ ಕಾರ್ಯಾಚರಣೆ ಕೈಗೊಂಡು ರಕ್ಷಣೆ ಮಾಡಲಾಗುತ್ತದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಜಿಲ್ಲಾಡಳಿತ ಮುಂದಾಗಿದೆ.
ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸರಾಸರಿಯಷ್ಟು ಮಳೆಯಾಗುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ವೆಂಕಟ ರಾಜ ಅವರು ವಿವರಿಸಿದರು.
ಎನ್ಡಿಆರ್ಎಫ್ ತಂಡದ ಪ್ರಮುಖರಾದ ಅರ್ಜುನ್ ಮಾತನಾಡಿ, ಪ್ರಾಕೃತಿಕ ವಿಕೋಪದಿಂದ ಭೂಕುಸಿತ ಹಾಗೂ ಪ್ರವಾಹ ಮುಂದಾಗಿದೆ.
ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಸರಾಸರಿಯಷ್ಟು ಮಳೆಯಾಗುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ವೆಂಕಟ ರಾಜ ಅವರು ವಿವರಿಸಿದರು.
ಎನ್ಡಿಆರ್ಎಫ್ ತಂಡದ ಪ್ರಮುಖರಾದ ಅರ್ಜುನ್ ಮಾತನಾಡಿ, ಪ್ರಾಕೃತಿಕ ವಿಕೋಪದಿಂದ ಭೂಕುಸಿತ ಹಾಗೂ ಪ್ರವಾಹ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್, ತಹಶೀಲ್ದಾರ್ ಕಿರಣ್ ಗೌರಯ್ಯ, ಗಣಿ ಮತ್ತು ಭೂ ವಿಜ್ಞಾನಿಗಳಾದ ರಾಹುಲ್, ರೋಜಾ, ಪಿಡಿಒ ಸೆಲ್ವಿನ್, ಕಂದಾಯ ನಿರೀಕ್ಷಕರಾದ ರುದ್ರೇಶ್, ಪ್ರಸಾದ್, ಕಾರ್ಮಿಕ ಇಲಾಖೆ ಅಧಿಕಾರಿ ಹರ್ಷವರ್ಧನ್, ಪ್ರಮುಖರಾದ ಡೀನ್ ಬೋಪಣ್ಣ ಇತರರು ಇದ್ದರು.