ಪೆರಾಜೆ, ಜು. ೨: ಇಲ್ಲಿಯ ಬಿಜೆಪಿ ಕಾರ್ಯಕರ್ತರ ಸಭೆ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು.
ಈ ಸಂದರ್ಭ ಉಪಸ್ಥಿತರಿದ್ದ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ೯ ವರ್ಷಗಳ ಸಾಧನೆ ಮತ್ತು ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ತಿಳಿಸಿದರು. ಅಲ್ಲದೇ ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು, ಮೊಬೈಲ್ ಟವರ್ ನಿರ್ಮಿಸಿಕೊಡುವ ಬಗ್ಗೆ, ಪ್ರಧಾನಮಂತ್ರಿ ಗ್ರಾಮಸಡಕ್ಗೆ ಅರ್ಜಿ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನ್, ಕೋಡಿರ ಪ್ರಸನ್ನ, ನಾಗೇಶ್ ಕುಂದಲ್ಪಾಡಿ, ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ ಸೇರಿದಂತೆ ಇನ್ನಿತರರು ಉಪಸ್ಥಿತಿತರಿದ್ದರು.
ಕಾರ್ಯಕ್ರಮವನ್ನು ನಂಜಪ್ಪ ನಿಡ್ಯಮಲೆ ಸ್ವಾಗತಿಸಿ, ಪ್ರಸನ್ನ ನೆಕ್ಕಿಲ ವಂದಿಸಿದರು.