ಮಡಿಕೇರಿ, ಜು. ೩: ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕಾಲೇಜಿನ ವಾರ್ಷಿಕೋತ್ಸವವು ಜು.೪ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಮಂಥರ್ ಗೌಡ, ಪ್ರಾಂಶುಪಾಲ ಪ್ರೊ. ಡಿ.ಜೆ.ಜವರಪ್ಪ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಪಿ.ಕಾವೇರಿ, ಜಿಲ್ಲಾ ಆಸ್ಪತ್ರೆಯ ವೈದ್ಯೆ ಡಾ.ಸೌಮ್ಯ ಪ್ರಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.