ಕರಿಕೆ, ಜು. ೩: ಇಲ್ಲಿಗೆ ಸಮೀಪದ ಚೆಂಬೇರಿ ಆನೆಪಾರೆಯ ಯುವಕನೋರ್ವ ಇಲಿ ಜ್ವರಕ್ಕೆ ಬಲಿಯಾದ ಘಟನೆ ವರದಿಯಾಗಿದೆ. ಆನೆಪಾರೆ ನಿವಾಸಿ ಕೂಲಿ ಕಾರ್ಮಿಕರಾದ ಬಾಲನ್ ಎಂಬವರ ಪುತ್ರ ಲಿಬೀನ್ ಎಂಬಾತ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು. ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.