ಗೋಣಿಕೊಪ್ಪಲು, ಜು. ೪: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಬು ಕಾಡಿನ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಹಾಗೂ ಸೇತುವೆಯ ನಿರ್ಮಾಣಕ್ಕೆ ೨೦ ಲಕ್ಷ ರೂಪಾಯಿಯ ಯೋಜನೆ ವೆಚ್ಚದ ಕಾಮಗಾರಿಗೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಈ ಯೋಜನೆಯಿಂದ ೮೦ಕ್ಕೂ ಅಧಿಕ ಗಿರಿಜನರ ಕುಟುಂಬಗಳಿಗೆ ಮುಖ್ಯ ರಸ್ತೆಯ ಸಂಪರ್ಕ ಸಿಗಲಿದೆ. ಗಿರಿಜನ ಕಲ್ಯಾಣ ಇಲಾಖೆಯ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳಲು ಶಾಸಕರು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಸಿ.ಎಸ್. ಅರುಣ್ ಮಾಚಯ್ಯ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ತಿತಿಮತಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್. ಟಾಟು ಮೊಣ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಚುಬ್ರು ಮತ್ತು ಅಫ್ರೊಜ್, ಜಿ.ಪಂ. ಮಾಜಿ ಸದಸ್ಯರಾದ ಬಿ.ಎನ್. ಪೃಥ್ವಿ, ಪಿ.ಆರ್. ಪಂಕಜ, ಸ್ಥಳೀಯರಾದ ಚೆಪ್ಪುಡೀರ ರಾಮಕೃಷ್ಣ ,ಡಿಸಿಸಿ ಸದಸ್ಯರಾದ ವಿನಯ್ ಕುಮಾರ್, ಗಿರಿಜನ ಕಲ್ಯಾಣ ಅಧಿಕಾರಿಗಳಾದ ಗುರುಶಾಂತಪ್ಪ, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.