ಸೋಮವಾರಪೇಟೆ, ಜು. ೩: ಸಮೀಪದ ಬಜೆಗುಂಡಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದ ಬೈಕ್ ಅವಘಡದಲ್ಲಿ ನಾಲ್ವರು ಗಾಯ ಗೊಂಡಿರುವ ಘಟನೆ ನಡೆದಿದೆ.
ಪಟ್ಟಣದಿಂದ ಯಡವಾರೆ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದವರು ಸೇರಿದಂತೆ ರಸ್ತೆ ಬದಿಯಲ್ಲಿ ತೆರಳು ತ್ತಿದ್ದ ವ್ಯಕ್ತಿಯೋರ್ವರಿಗೆ ಗಾಯಗಳಾಗಿವೆ.
ಯಡವಾರೆ ಗ್ರಾಮದ ಪ್ರಶಾಂತ್ ಎಂಬಾತ ತನ್ನ ಈರ್ವರು ಸ್ನೇಹಿತರೊಂದಿಗೆ ತೆರಳುತ್ತಿದ್ದ ಸಂದರ್ಭ ಬಜೆಗುಂಡಿ ಗ್ರಾಮದಲ್ಲಿ ರುವ ಬೇಳೂರು ಗ್ರಾ.ಪಂ. ಕಚೇರಿ ಸಮೀಪದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು, ಈ ಸಂದರ್ಭ ಬೈಕ್ನಲ್ಲಿದ್ದವರು ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಸುರೇಶ್ ಅವರ ಮೇಲೆ ಬಿದ್ದಿದ್ದಾರೆ.
ಪರಿಣಾಮ ಸುರೇಶ್ ಅವರಿಗೂ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸುರೇಶ್ ನೀಡಿದ ದೂರಿನ ಮೇಲೆ ಸೋಮ ವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮೊಕದ್ದಮೆ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.