ಕೂಡಿಗೆ, ಜು. ೪: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದಲ್ಲಿರುವ ಕೆರೆಯನ್ನು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಅಮೃತ ಸರೋವರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಕೆರೆಗಳು ಹೂಳು ತುಂಬಿ ಹದಗೆಟ್ಟಿವೆ. ವಿವಿಧ ಕೆರೆಗಳನ್ನು ಅಭಿವೃದ್ಧಿ ಪಡಿಸಲು ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಹೆಚ್ಚು ಅನುಕೂಲಕರವಾಗಿದೆ. ಸಾರ್ವಜನಿಕರು, ರೈತರು ತಮ್ಮ ಹೆಸರನ್ನು ಗ್ರಾಮ ಪಂಚಾಯಿತಿಯಲ್ಲಿ ನೋಂದಣಿ ಮಾಡಿಕೊಂಡು ಕೆಲಸವನ್ನು ನಿರ್ವಹಿಸಲು ಮುಂದಾಗಬೇಕೆAದು ಕರೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್. ಹೇಮಲತಾ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ಲಕ್ಷಿö್ಮ, ಲತಾಬಾಯಿ, ಪ್ರದೀಪ್, ಕಾರ್ಯದರ್ಶಿ ಕೆ.ಸಿ. ರವಿ, ನರೇಗಾ ಇಂಜಿನಿಯರ್ ಕಿಶೋರ್, ಕರ ವಸೂಲಿಗಾರ ಚಂದ್ರಪ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.