ವೀರಾಜಪೇಟೆ, ಜು. ೩ : ವೀರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ೨೦೨೩-೨೦೨೪ನೇ ಸಾಲಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಹಾಗೂ ಫ್ರೆಶರ್ಸ್ಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳು ಕಾಲೇಜಿನ ನೀತಿ ನಿಯಮಗಳ ಬಗ್ಗೆ ತಿಳಿಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಆನಂದ್ ಕಾರ್ಲ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಸಾಧನೆಯ ಮೂಲಕ ವಿದ್ಯೆಯನ್ನು ಮೈಗೂಡಿಸಿ ಸತತ ಪ್ರಯತ್ನ ಪರಿಶ್ರಮದ ಮೂಲಕ ಜೀವನದಲ್ಲಿ ಮುಂದೆ ಬನ್ನಿ ಎಂಬ ಕಿವಿ ಮಾತನಾಡಿದರು.
ಸಮಾರಂಭದಲ್ಲಿ ೨೦೨೨-೨೦೨೩ ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಅತ್ಯುನ್ನತ್ತ ಅಂಕಗಳಿಸಿ ತಾಲೂಕಿಗೆ ಪ್ರಥಮ ಮತ್ತು ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದ ಪಿ. ಅಂಜಲಿಯವರನ್ನು ಸನ್ಮಾನಿಸಲಾಯಿತು.
ದೀಪು ಮತ್ತು ತಂಡದವರು ಪ್ರಾರ್ಥಿಸಿದರು. ದಮಯಂತಿ ಎಂ.ಪಿ. ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಡೈನಾ ವಂದಿಸಿದರು.
ವಿದ್ಯಾರ್ಥಿನಿಯರಾದ ಹಸೀನಾ ಮತ್ತು ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು, ಸಮಾರಂಭದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.