ಕೂಡಿಗೆ, ಜು. ೪: ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಮಳೆಗಾಲದ ಮುನ್ನೆಚ್ಚರಿಕೆಯ ಕ್ರಮವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಮತ್ತು ಕಾವೇರಿ ನದಿ ದಂಡೆಯ ಮನೆಗಳಿಗೆ ತಿಳುವಳಿಕೆ ಪತ್ರ ನೀಡಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನಾದೇವಿ, ಕಾರ್ಯದರ್ಶಿ ಪುನೀತ್, ಕರವಸೂಲಿಗಾರ ಅನಿಲ್, ಬಾಪು ಇದ್ದರು.