ಸೋಮವಾರಪೇಟೆ, ಜು. ೩: ಇಲ್ಲಿನ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಸ್. ವೆಂಕಟೇಶ್ ಅವರನ್ನು ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಎಸ್.ಎನ್. ನರಗುಂದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಳೆದ ಮೂವತ್ತೆöÊದು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಶಿರಸ್ತೇದಾರ್‌ಗಳಾದ ಲೋಹಿತ್, ಸುಶೀಲ ಪಳಂಗಪ್ಪ, ರಾಜಸ್ವ ನಿರೀಕ್ಷಕ ಪ್ರಹ್ಲಾದ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.