ಕೂಡಿಗೆ, ಜು. ೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್, ಸಮವಸ್ತç ಮತ್ತು ನೋಟ್ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮವನ್ನು ವಿಜಯನಗರ ಯೂತ್ ಕ್ಲಬ್ ಸದಸ್ಯರು ಆಯೋಜಿಸಿದ್ದರು.
ಕಾರ್ಯಕ್ರಮದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಕೊಡಗು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್ ಹಾಗೂ ಇತರರು ಇದ್ದರು.