ಮಡಿಕೇರಿ, ಜು. ೪: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ ಬಿ. ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪೆರುಮುಂಡ ಎಂ. ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿ ಸಂದೀಪ್ ಬಿ.ಜಿ. ಇವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.