ನಾಪೋಕ್ಲು, ಜು. ೩: ಇಲ್ಲಿಗೆ ಸಮೀಪದ ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿ ಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸ ಲಾಯಿತು.

ಮೂರ್ನಾಡು ಪೊಲೀಸ್ ಠಾಣಾ ಸಿಬ್ಬಂದಿ ಹನುಮಂತಪ್ಪ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ವಿದ್ಯಾರ್ಥಿ ಗಳಿಗೆ ವಿವರಿಸಿ ಹದಿಹರೆಯದ ವಯಸ್ಸಿನವರು ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅವರ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಶಾಲಾ-ಕಾಲೇಜು ವಿದ್ಯಾರ್ಥಿ ಗಳು ದುಶ್ಚಟಗಳಿಗೆ ದಾಸರಾಗದೆ ವಿದ್ಯಾರ್ಜನೆ ಮಾಡಿ ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಾಣಿಶ್ರೀ, ಮೂರ್ನಾಡು ಪೊಲೀಸ್ ಠಾಣಾ ಎಎಸ್‌ಐ ಅನಿಲ್ ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ದಿಲೀಪ್, ಮಂಜುನಾಥ್ ಆಗಮಿಸಿದರು. ಈ ಸಂದರ್ಭ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಗಳು ಹಾಜರಿದ್ದರು.