ಕುಶಾಲನಗರ, ಜು. ೪: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಆಶ್ರಯದಲ್ಲಿ ತಾ.೬ ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಸಚಿವರು ಮತ್ತು ಶಾಸಕರುಗಳ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷರಾದ ಹೆಚ್ ವಿ ಶಿವಪ್ಪ ತಿಳಿಸಿದ್ದಾರೆ.
ಇಲ್ಲಿನ ಪತ್ರಿಕಾ ಭವನದಲ್ಲಿ ಮಾತನಾಡಿ, ಮಲ್ಲೇಶ್ವರಂ ಬಳಿ ಚೌಡಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ಅಂದು ಸಂಜೆ ೫ ಗಂಟೆಗೆ ಅಖಿಲ ಭಾರತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮುದಾಯದ ಸಚಿವರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಸೇರಿದಂತೆ ಒಟ್ಟು ೭೨ ಮಂದಿ ಗಣ್ಯರನ್ನು ಅಭಿನಂದಿಸಲಾಗುತ್ತದೆ ಎಂದರು.
ಮಹಾಸಭೆಯ ಗೌರವಾಧ್ಯಕ್ಷರಾದ ಭೀಮಣ್ಣ ಖಂಡ್ರೆ, ರಾಜ್ಯ ಘಟಕದ ಅಧ್ಯಕ್ಷರಾದ ಡಾ.ಎನ್. ತಿಪ್ಪಣ್ಣ, ಸಚಿವರು ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಬಿ. ಖಂಡ್ರೆ ಅವರುಗಳು ಉಪಸ್ಥಿತರಿರುವರು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಮೂರ್ತಿ ಖಜಾಂಚಿ ಎಚ್.ಪಿ. ಉದಯಕುಮಾರ್ ಇದ್ದರು.