ಮಡಿಕೇರಿ, ಜು. ೪: ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜಿನ ವಾರ್ಷಿಕೋತ್ಸವವು ತಾ.೭ ರಂದು ಬೆಳಿಗ್ಗೆ ೧೦ ಗಂಟೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಶಾಸಕರು ಹಾಗೂ ಕಾಲೇಜು ಮಂಡಳಿ ಅಧ್ಯಕ್ಷ ಡಾ.ಮಂಥರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ್ ಎಸ್. ಆಲೂರು, ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಸೀನಪ್ಪ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆÀ ಡಾ.ಕೆ.ಡಿ.ನಿರ್ಮಲ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ವಸಂತಕುಮಾರಿ ಇತರರು ಪಾಲ್ಗೊಳ್ಳಲಿದ್ದಾರೆ.