ಸುಂಟಿಕೊಪ್ಪ, ಜು. ೫: ಗದ್ದೆ ಹಳ್ಳ ರಾಷ್ಟಿçÃಯ ಹೆದ್ದಾರಿ ವೃತ್ತದ ಬಳಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣು ಗೋಪಾಲ್ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಠಾಣಾಧಿಕಾರಿ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.