ಚೆಯ್ಯAಡಾಣೆ, ಜು. ೫ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿ ಗಳನ್ನು ಮಾಲು ಸಹಿತ ನಾಪೋಕ್ಲು ಪೊಲೀಸರು ಬಂಧಿಸಿ ದ್ದಾರೆ.
ಮಡಿಕೇರಿ ವಿದ್ಯಾ ನಗರದ ನಿವಾಸಿ ಆರ್. ವಿನೋದ್, ನಾಪೋಕ್ಲು ಬೇತು ಗ್ರಾಮದ ನಿವಾಸಿ ವಿಷ್ಣು ಎಂ.ವಿ ಬಂಧಿತ ಆರೋಪಿಗಳಾಗಿದ್ದಾರೆ.
ನಾಪೋಕ್ಲು ಸಮೀಪದ ಬೇತು ಗ್ರಾಮದಲ್ಲಿರುವ ಬಸ್ಸು ತಂಗುದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ೨೩೦ ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಸುಂದರ್ರಾಜ್ ನಿರ್ದೇಶನದಂತೆ, ಮಡಿಕೇರಿ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. - ಅಶ್ರಫ್