ಮಡಿಕೇರಿ, ಜು. ೫: ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶದಂತೆ ತಾ. ೧೧.೦೨.೨೦೨೩ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿ ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. ೫೦ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದ್ದು ಅದರನ್ವಯ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ತಾ. ೧೧.೦೨.೨೦೨೩ಗೊಳಗೆ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ. ೫೦ರಷ್ಟು ರಿಯಾಯಿತಿ ನೀಡಲಾಗಿದೆ.

ಈ ರಿಯಾಯಿತಿಯ ತಾ. ೦೯.೦೯.೨೦೨೩ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳೀಗೆ ಮಾತ್ರ ಅನ್ವಯವಾಗುತ್ತದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪ ಆದೇಶದಲ್ಲಿ ತಿಳಿಸಿದ್ದಾರೆ.