ವೀರಾಜಪೇಟೆ, ಜು. ೫: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದ್ದ ಸಂದÀರ್ಭ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ವೀರಾಜಪೇಟೆ ಹೊರವಲಯ ನಲ್ವತೊಕ್ಲು ಗ್ರಾಮದ ಬದ್ರಿಯಾ ರಸ್ತೆ ಬದಿಯಲ್ಲಿ ವಾಹನವೊಂದರಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ವೀರಾಜಪೇಟೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ೮ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಐದು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.