ಸೋಮವಾರಪೇಟೆ, ಜು. ೫: ಇಲ್ಲಿನ ಅಪ್ಪು ಅಭಿಮಾನಿ ಸಂಘದಿAದ ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ದ್ವಿತೀಯ ಪಿಯುಸಿಯಲ್ಲಿ ೬೦೦/೬೦೦ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕೆ.ಎ. ಅನನ್ಯ ಮತ್ತು ೧೦ ನೇ ತರಗತಿಯಲ್ಲಿ ೬೨೫/೫೯೦ ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಅನಿಷಾ ಅವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಸ್ಥಳೀಯ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕ ನಾಗರಾಜು ಅವರು ವರ್ಗಾವಣೆ ಯಾಗುತ್ತಿರುವ ಹಿನ್ನೆಲೆ ಕಾರ್ಯಕ್ರಮ ದಲ್ಲಿ ಸನ್ಮಾನಿಸಲಾಯಿತು. ಅಪ್ಪು ಅಭಿಮಾನಿ ಸಂಘದ ಅಧ್ಯಕ್ಷ ರವಿ, ಪಂಚಾಯಿತಿ ಅಧ್ಯಕ್ಷೆ ಪುಷ್ಪ, ಉಪಾಧ್ಯಕ್ಷ ಪ್ರವೀಣ್, ಸದಸ್ಯ ಸಂಭ್ರಮ್, ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಇದ್ದರು.