ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹ
ಬೆಂಗಳೂರು, ಜು. ೬: ಸಚಿವರೊಬ್ಬರ ಒತ್ತಡದಿಂದ ವಿನಾಕಾರಣ ತನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ಕೆಎಸ್ಆರ್ಟಿಸಿ ಡಿಪೋ ಚಾಲಕ ಕಮ್ ಕಂಡಕ್ಟರ್ ಜಗದೀಶ್ ಅವರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಗುರುವಾರ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಎಫ್ಐಆರ್ ದಾಖಲಿಸಿಲ್ಲ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಸರ್ಕಾರ ರಕ್ಷಿಸುತ್ತಿದೆ. ತಕ್ಷಣ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಉದ್ಯೋಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರೂ ಪೊಲೀಸರು ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸರ್ಕಾರಿ ಅಧಿಕಾರಿಗಳು ಸಂಕಷ್ಟದಲ್ಲಿದ್ದಾರೆ ಎಂಬುದನ್ನು ಈ ಘಟನೆ ತೋರಿಸುತ್ತದೆ. ಇದನ್ನೇ ಜನ ದಿನನಿತ್ಯ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು. ಈ ಹಿಂದೆ ಗುತ್ತಿಗೆದಾರರೊಬ್ಬರು ೪೦ ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಾಗ ಬಿಜೆಪಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಿದ್ದರು ಎಂದು ಮಾಜಿ ಸಿಎಂ ಹೇಳಿದರು. ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರ ಅಧಿಕಾರಕ್ಕೆ ಬಂದ ೫೦ ದಿನಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ರಾಜ್ಯದ ಕೆಲವು ಭಾಗಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಕಾರಣಕ್ಕೆ ಒತ್ತಡ ಹಾಕಿ ವರ್ಗಾವಣೆ ಮಾಡಿರುವುದೇ ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂದು ಆರೋಪಿಸಿದರು. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ಟಿಸಿ ನೌಕರನ ಪತ್ನಿ ಪಂಚಾಯಿತಿ ಸದಸ್ಯೆಯಾಗಿದ್ದು, ಅವರ ಮೇಲೆ ಅನಗತ್ಯ ಒತ್ತಡ ಹೇರಲಾಗಿದೆ ಎಂದು ಕುಮಾರಸ್ವಾಮಿ ದೂರಿದರು. ಸಚಿವ ಚಲುವರಾಯಸ್ವಾಮಿ ವಿರುದ್ಧ ಸರಣಿ ಆರೋಪ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕರಾದ ಪಿಎಂ ನರೇಂದ್ರಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆಯಿತು.
ತಾ. ೧೪ ರಂದು ಭಾರತದ ಚಂದ್ರಯಾನ-೩ ಉಡಾವಣೆ
ಬೆಂಗಳೂರು, ಜು. ೭: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೂರನೇ ಪ್ರಯತ್ನ ಅಂತಿಮ ಘಟ್ಟ ತಲುಪಿದ್ದು, ತಾ. ೧೪ ರಂದು ಮಧ್ಯಾಹ್ನ ೨.೩೫ಕ್ಕೆ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ತಾ. ೧೪ ರಂದು ಮಧ್ಯಾಹ್ನ ೨.೩೫ಕ್ಕೆ ಚಂದ್ರಯಾನ-೩ ಮಿಷನ್ ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಿ ಎಂದು ಗುರುವಾರ ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ- ೩ ಬಾಹ್ಯಾಕಾಶ ನೌಕೆಯನ್ನು ಒಳಗೊಂಡ ಪೇಲೋಡ್ ಅನ್ನು ಜಿಯೋ ಸಿಂಕ್ರೊನಸ್ ಲಾಂಚ್ ವೆಹಿಕಲ್ ಮಾರ್ಕ್ III (ಜಿಎಸ್ಎಲ್ವಿ ಎಂಕೆ-III) ಉಡಾವಣಾ ನೌಕೆಗೆ ಬುಧವಾರ ಸೇರ್ಪಡೆಗೊಳಿಸಲಾಗಿದೆ. ಈ ಮುಂಚೆ ಬಹು ನಿರೀಕ್ಷಿತ ಚಂದ್ರಯಾನ-೩ ತಾ. ೧೩ ರಂದು ಉಡಾವಣೆಗೊಳ್ಳಲಿದೆ ಎಂದು ಇಸ್ರೋ ಘೋಷಿಸಿತ್ತು. ಇದೀಗ ಉಡಾವಣೆ ತಾ. ೧೪ ರಂದು, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆಯಲಿದೆ ಎಂದು ಇಸ್ರೋ ಹೇಳಿದೆ.
ವಿಶ್ವಕಪ್ಗೆ ೩ ತಿಂಗಳ ಮೊದಲೇ ಬಾಂಗ್ಲಾಗೆ ಆಘಾತ
ಢಾಕಾ, ಜು. ೭: ಬಾಂಗ್ಲಾದೇಶದ ಓಡಿಐ ನಾಯಕ ತಮೀಮ್ ಇಕ್ಬಾಲ್ ೨೦೨೩ರ ವಿಶ್ವಕಪ್ಗೆ ಮೂರು ತಿಂಗಳ ಮೊದಲು ಅಂರ್ರಾಷ್ಟಿçÃಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ ೧೬ ವರ್ಷಗಳ ಅಂರ್ರಾಷ್ಟಿçÃಯ ವೃತ್ತಿಜೀವನ ಅಂತ್ಯಗೊAಡಿದೆ. ಚಟ್ಟೋಗ್ರಾಮ್ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಮೀಮ್ ಇಕ್ಬಾಲ್ ನಿವೃತ್ತಿ ಘೋಷಿಸಿದರು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತಮೀಮ್ ಇಕ್ಬಾಲ್ ಬದಲಿಗೆ ಏಕದಿನ ನಾಯಕನ ಹೆಸರನ್ನು ಪ್ರಕಟಿಸಿಲ್ಲ. ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ಟಿ-೨೦ ತಂಡದ ನಾಯಕರಾಗಿದ್ದರೆ, ಲಿಟನ್ ದಾಸ್ ಟೆಸ್ಟ್ ತಂಡದ ಉಸ್ತುವಾರಿ ವಹಿಸಿದ್ದಾರೆ. ೩೪ ವರ್ಷದ ತಮೀಮ್ ಇಕ್ಬಾಲ್ ಕಳೆದ ವರ್ಷ ಇದೇ ಸಮಯದಲ್ಲಿ ಟಿ೨೦ ಅಂರ್ರಾಷ್ಟಿçÃಯ ಕ್ರಿಕೆಟ್ನಿಂದ ನಿವೃತ್ತರಾಗಿದ್ದರು. ಇಕ್ಬಾಲ್ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಏಪ್ರಿಲ್ನಲ್ಲಿ ಬಾಂಗ್ಲಾದೇಶದ ವಿರುದ್ಧ ಆಡಿದ್ದರು. ತಮೀಮ್ ಇಕ್ಬಾಲ್ ೨೦೦೭ರಲ್ಲಿ ಅಂರ್ರಾಷ್ಟಿçÃಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ೨೦೦೭ರ ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶದ ಐತಿಹಾಸಿಕ ವಿಜಯದಲ್ಲಿ ಅವರು ಅರ್ಧ ಶತಕವನ್ನು ಗಳಿಸಿದ್ದರು. ತಮೀಮ್ ಇಕ್ಬಾಲ್ ಬಾಂಗ್ಲಾದೇಶ ಪರ ಏಕದಿನದಲ್ಲಿ ಅತಿ ಹೆಚ್ಚು ರನ್ (೮೩೧೩) ಮತ್ತು ಶತಕ (೧೪) ಗಳಿಸಿದ ಬ್ಯಾಟ್ಸ್ಮನ್ ಆಗಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರ ಸಕ್ರಿಯ ಕ್ರಿಕೆಟಿಗರಲ್ಲಿ ಮೂರನೇ ಅತಿ ಹೆಚ್ಚು ಓಡಿಐ ರನ್ ಗಳಿಸಿದ ಆಟಗಾರರಾಗಿದ್ದಾರೆ. ಅದೇ ಸಮಯದಲ್ಲಿ ಟೆಸ್ಟ್ಗಳಲ್ಲಿ ತಮೀಮ್ ಇಕ್ಬಾಲ್ ೭೦ ಪಂದ್ಯಗಳಲ್ಲಿ ೧೦ ಶತಕಗಳು ಸೇರಿದಂತೆ ೩೮.೮೯ ಸರಾಸರಿಯಲ್ಲಿ ೫೧೩೪ ರನ್ ಗಳಿಸಿದರು. ಅವರು ಬಾಂಗ್ಲಾದೇಶ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ.
ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ನವದೆಹಲಿ, ಜು. ೭: ಎನ್ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ. ಶರದ್ ಪವಾರ್ ಅವರು ಕರೆದಿದ್ದ ಕಾರ್ಯಕಾರಿ ಸಮಿತಿ ಸಭೆಯ ನಂತರ ಜನಪಥ್ ೬ರಲ್ಲಿರುವ ಅವರ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು, ಸಂಕಷ್ಟದ ಸಮಯದಲ್ಲಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾರ್ಯಕಾರಿ ಸಮಿತಿ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ತಾವೇ ಎನ್ಸಿಪಿ ಅಧ್ಯಕ್ಷರು ಎಂದು ಪ್ರತಿಪಾದಿಸಿದರು. ನಾನು ಎನ್ಸಿಪಿ ಅಧ್ಯಕ್ಷ, ಯಾರಾದರೂ ತಾವು ಎನ್ಸಿಪಿ ಅಧ್ಯಕ್ಷರು ಎಂದು ಹೇಳಿದರೆ ಅದು ಸಂಪೂರ್ಣ ಸುಳ್ಳು. ಅದರಲ್ಲಿ ಯಾವುದೇ ಸತ್ಯವಿಲ್ಲ. ಯಾರಾದರೂ ಏನಾದರೂ ಹೇಳಿದರೆ ಅದಕ್ಕೆ ಯಾವುದೇ ಪ್ರಾಮುಖ್ಯತೆ ನೀಡಬೇಡಿ ಎಂದು ಪವಾರ್ ಹೇಳಿದ್ದಾರೆ.
ತಾಂಜಾನಿಯಾದಲ್ಲಿ ಭಾರತದ ಹೊರಗಿನ ಮೊದಲ ವಿದೇಶಾಂಗ ಸಚಿವಾಲಯ
ನವದೆಹಲಿ, ಜು. ೭: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ ಜಾಂಜಿಬಾರ್ನಲ್ಲಿ ಐಐಟಿ ಮದ್ರಾಸ್ನ ಕ್ಯಾಂಪಸ್ನ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ. ಬುಧವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಜಾಂಜಿಬಾರ್ ಅಧ್ಯಕ್ಷ ಹುಸೇನ್ ಅಲಿ ಮ್ವಿನಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಜೈಂಶಕರ್ ಅವರು ಪ್ರಸ್ತುತ ತಾಂಜಾನಿಯಾ ಪ್ರವಾಸದಲ್ಲಿದ್ದಾರೆ. ಭಾರತದ ಹೊರಗೆ ಸ್ಥಾಪಿಸಲಾದ ಮೊದಲ ಐಐಟಿ ಕ್ಯಾಂಪಸ್ ಜಾಂಜಿಬಾರ್ನಲ್ಲಿರಲಿದೆ ಎಂದು ಸಚಿವಾಲಯ ಹೇಳಿದೆ. ಭಾರತದ ಶಿಕ್ಷಣ ಸಚಿವಾಲಯ, ಐಐಟಿ ಮದ್ರಾಸ್ ಮತ್ತು ಜಾಂಜಿಬಾರ್ನ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವಾಲಯದ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅದು ಹೇಳಿದೆ. ರಾಷ್ಟಿçÃಯ ಶಿಕ್ಷಣ ನೀತಿ ೨೦೨೦ ಉನ್ನತ ಕಾರ್ಯಕ್ಷಮತೆ ಹೊಂದಿರುವ ಭಾರತೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳನ್ನು ಇತರ ದೇಶಗಳಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. “ಈ ಕ್ಯಾಂಪಸ್ ಭಾರತ ಮತ್ತು ತಾಂಜಾನಿಯಾ ನಡುವಿನ ದೀರ್ಘಕಾಲದ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಶೈಕ್ಷಣಿಕ ಪಾಲುದಾರಿಕೆಯ ಸಂಬAಧವನ್ನು ಔಪಚಾರಿಕಗೊಳಿಸಲಾಗಿದೆ. ಐಐಟಿ ೨೦೨೩ರ ಅಕ್ಟೋಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದೆ.