ಮಡಿಕೇರಿ, ಜು. ೬: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಿರ್ಮಿಸಿದ ರೂ. ೭.೭೦ ಕೋಟಿ ವೆಚ್ಚದಲ್ಲಿ ನಡೆದ ತಡೆಗೋಡೆ ಕಾಮಗಾರಿ ಸಮರ್ಪಕವಾಗಿಲ್ಲ ಎಂದು ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿದರು.

ತಂತ್ರಜ್ಞಾನ ಸರಿ ಇದೆ. ಕೆಲವು ತಿದ್ದುಪಡಿಗೆ ತಜ್ಞರು ಸೂಚಿಸಿದ್ದಾರೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಶಾಸಕರಿಗೆ ಈ ಬಗ್ಗೆ ಉತ್ತರಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಪ್ರಕರಣಕ್ಕೆ ಸಂಬAಧಿಸಿದ ಮಾಹಿತಿಯನ್ನು ಶಾಸಕ ಮಂಥರ್‌ಗೌಡ, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.