ಸೋಮವಾರಪೇಟೆ, ಜು. ೬: ಒಡಿಸ್ಸಾದ ಭುವನೇಶ್ವರದಲ್ಲಿ ನಡೆದ ಪರಿಶಿಷ್ಟ ಪಂಗಡದ ಖೇಲ್ ಮಹೋತ್ಸವದಲ್ಲಿ ರಾಷ್ಟçಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ಪ್ರಥಮ ಸ್ಥಾನ ಪಡೆದಿದ್ದು, ತಂಡವನ್ನು ಪ್ರತಿನಿಧಿಸಿದ್ದ ಜಿಲ್ಲೆಯ ಆಟಗಾರ ಗರಗಂದೂರಿನ ಸಂತೋಷ್ ಅವರನ್ನು ಇಲ್ಲಿನ ಲಯನ್ಸ್ ಕ್ಲಬ್ ಆಫ್ ಸೋಮವಾರಪೇಟೆ ವತಿಯಿಂದ ಸನ್ಮಾನಿಸಲಾಯಿತು.

ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂಥರ್ ಗೌಡ, ಲಯನ್ಸ್ ಸಂಸ್ಥೆಯ ಜಿಲ್ಲಾ ಗವರ್ನರ್ ಡಾ. ಗೀತಾ ಪ್ರಕಾಶ್, ಅಧ್ಯಕ್ಷ ಎ.ಎಸ್. ಮಹೇಶ್, ಪ್ರಾಂತೀಯ ಅಧ್ಯಕ್ಷ ಅಂಬೆಕಲ್ ನವೀನ್, ವಲಯ ಸಂಯೋಜಕರಾದ ಮಹದೇವ್, ಕವಿತ, ಲಯನ್ಸ್ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ಸಿ.ಕೆ. ರೋಹಿತ್ ಮತ್ತಿತರರು ಇದ್ದರು.