ವೀರಾಜಪೇಟೆ, ಜು. ೫: ವೀರಾಜಪೇಟೆ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಕಚೇರಿ ಸಿಬ್ಬಂದಿ ಮತ್ತು ಲೋಕೋಪಯೋಗಿ, ಸೆಸ್ಕ್ ಇಲಾಖೆಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಂತೆ, ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿ ಗಳಿಗೆ ಸೂಚಿಸಿದರು. ಮಳೆಯಿಂದ ಉಂಟಾಗಬಹುದಾದ ಅವಘಡವನ್ನು ತಪ್ಪಿಸಲು ಅಗತ್ಯ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಹೆಚ್ಚಿನ ಮಳೆಯಿಂದ ಉಂಟಾಗ ಬಹುದಾದ ಪ್ರಾಣ ಹಾನಿ, ಜಾನುವಾರು ಹಾನಿ, ಆಸ್ತಿ-ಪಾಸ್ತಿ ಹಾನಿ ಹೀಗೆ ಪ್ರತಿಯೊಂದರ ಬಗ್ಗೆ ಎಚ್ಚರ ವಹಿಸಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸ್ಥಳ ಪರಿಶೀಲಿಸಿ ಹೆಚ್ಚಿನ ಮಳೆಯಿಂದ ಪ್ರವಾಹ, ಬರೆ ಕುಸಿತ ಮತ್ತಿತರ ಘಟನೆಗಳ ಬಗ್ಗೆ ಮಾಹಿತಿ

(ಮೊದಲ ಪುಟದಿಂದ) ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಲೋಕೋಪಯೋಗಿ, ಪುರಸಭೆ, ಸ್ಥಳೀಯ ಸಂಸ್ಥೆಗಳು, ಸೆಸ್ಕ್, ನೀರಾವರಿ, ಅರಣ್ಯ, ಕಂದಾಯ, ಹೀಗೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಸಂಬAಧಿಸಿದAತೆ ಅಗತ್ಯ ಮುನ್ನೆಚ್ಚರ ವಹಿಸಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವೆಂಕಟ್ ರಾಜಾ ಅವರು ಸೂಚಿಸಿದರು.

ಸೆಸ್ಕ್ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್ ಅವರು, ಮುಂಗಾರು ಸಂಬAಧ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಬಳಿಕ ತಾಲೂಕು ಕಚೇರಿಯ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ರಾಮಚಂದ್ರ, ಲೋಕೋಪಯೋಗಿ ಇಲಾಖೆ ಅಭಿಯಂತರ ಸಿದ್ದೆಗೌಡ, ಸೆಸ್ಕ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.