ಮಡಿಕೇರಿ, ಜು. ೫: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಡಿಕೇರಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ದ್ವಿತೀಯ ಪಿ.ಯು.ಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಬರಲು ಕಾರಣರಾದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು, ಜೀವನದಲ್ಲಿ ಸಾಧನೆ ಮಾಡಬೇಕೆಂದರೆ ಶಿಕ್ಷಕರ ಮಾರ್ಗದರ್ಶನ ಮುಖ್ಯ ವಿದ್ಯಾರ್ಥಿ ಗಳು ಶಿಕ್ಷಕರ ಮಾರ್ಗದರ್ಶನವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ದಿವಾಕರ್ ಹೆಚ್.ಎಲ್. ಇಲ್ಲಿಯವರೆಗೆ ಡಿ.ಎಸ್.ಎಸ್. ಮಾಡಿರುವ ಸಮಾಜ ಸೇವೆಯ ವಿವರ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಮಂಥರ್ ಗೌಡ, ಸಮಾಜದಲ್ಲಿ ಇಂದು ಜನರು ಯಾವುದೇ ಕಟ್ಟುಪಾಡುಗಳಿಲ್ಲದೆ ಜೀವನ ನಡೆಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಡಾ. ಬಿ.ಆರ್. ಅಂಬೇಡ್ಕರ್. ಅವರ ಮುಂದಾಳತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ಬದುಕಿನಲ್ಲಿ ಬಹಳಷ್ಟು ಮುಖ್ಯವಾಗಿದೆ, ಜನಪ್ರತಿನಿಧಿಯಾಗಿರುವ ನಾನು ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ನೀಡುವಲ್ಲಿ ಜೊತೆಯಾಗಿರುತ್ತೇನೆ ಎಂದು ಹಿತನುಡಿಗಳನ್ನಾಡಿದರು.

ಮಕ್ಕಳ ವಿಭಾಗದ ವೈದ್ಯ ವೈದ್ಯಾಧಿಕಾರಿ ಪುರುಶೋತ್ತಮ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ನಮ್ಮ ಜೀವನದಲ್ಲಿ ಬಹಳ ಮುಖ್ಯವಾಗಿರುತ್ತದೆ. ನಮ್ಮ ಬದುಕಿಗೆ ಮುಖ್ಯ ತಿರುವನ್ನು ನೀಡುವ ಸಮಯ ಇದಾಗಿದ್ದು, ಶಿಕ್ಷಕರ ಮಾರ್ಗದರ್ಶ ನವನ್ನು ಸೂಕ್ತವಾಗಿ ಬಳಸಿಕೊಳ್ಳ ಬೇಕು ಎಂದು ವಿಚಾರ ವಿನಿಮಯ ಮಾಡಿದರು.

ಸಮಾಜಸೇವಕ ವಾಸುದೇವ್ ಮಾತನಾಡುತ್ತಾ, ಸಾಧನೆ ಮಾಡಿದವರ ಮಾತುಗಳನ್ನು ಕೇಳಿದರೆ ನಮ್ಮ ಜೀವನಕ್ಕೆ ಬೇಕಾದ ಉಪಯುಕ್ತ ಅಂಶಗಳು ಸಿಗುತ್ತವೆ.

ಒಬ್ಬ ವ್ಯಕ್ತಿ ಉನ್ನತ ಸ್ಥಾನವನ್ನು ಏರಬೇಕೆಂದರೆ ಅದಕ್ಕೆ ಮುಖ್ಯ ಕಾರಣ ಶಿಕ್ಷಕರು. ಅವರನ್ನು ಗೌರವಿಸುವ ಡಿ.ಎಸ್.ಎಸ್.ನ ಕಾರ್ಯ ಪ್ರಶಂಸನೀಯವಾಗಿದೆ ಎಂದರು.

ಪ್ರಸೂತಿ ವೈದ್ಯೆಯಾಗಿರುವ ಡಾ. ಸೌಮ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗುರಿ ಇರಬೇಕು, ಆ ಗುರಿಯನ್ನು ಬೆನ್ನತ್ತಿ ಹೋಗಲು ಶಿಕ್ಷಕರು ನೆರವಾಗುತ್ತಾರೆ. ವಿದ್ಯಾರ್ಥಿಗಳು ಗಟ್ಟಿ ನಿಲುವನ್ನು ಬೆಳೆಸಿಕೊಳ್ಳಬೇಕೆಂದರು.

ಡಿ.ಎಸ್.ಎಸ್. ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು ಎಂಬAತೆ ಶಿಕ್ಷಕ ವೃತ್ತಿಗೆ ಬಹಳ ಗೌರವ ಇದೆ, ವ್ಯಕ್ತಿ ಯೊಬ್ಬನನ್ನು ಉನ್ನತ ಹುದ್ದೆಗೇರಿಸುವ ಸಾಮರ್ಥ್ಯ ಇರುವುದು ಶಿಕ್ಷಕರಿಗೆ. ಆದರೆ ಶಿಕ್ಷಕರು ಮಾತ್ರ ಮತ್ತಷ್ಟು ವಿದ್ಯಾರ್ಥಿಗಳನ್ನು ದೇಶಕ್ಕೆ ಕೊಡುಗೆ ನೀಡುವಲ್ಲಿ ಶ್ರಮಿಸುತ್ತಿರುತ್ತಾರೆ ಎಂದು ಶಿಕ್ಷಕರ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಹೆಚ್.ವಿ. ದೇವದಾಸ್ ಮಾತನಾಡಿ, ದಿವಾಕರ್ ನೇತೃತ್ವದ ಡಿಎಸ್‌ಎಸ್ ಕೊಡಗಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸು ತ್ತಿರುವುದು ಹೆಮ್ಮೆಯ ವಿಚಾರ. ಇವರ ಈ ಕಾರ್ಯಕ್ರಮಗಳಿಗೆ ವೈದ್ಯಕೀಯ ಇಲಾಖೆಯಿಂದ ಸೂಕ್ತ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿ.ಎಸ್.ಎಸ್ ವಿಭಾಗೀಯ ಸಂಚಾಲಕ ವೀರಭದ್ರಯ್ಯ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ಚಂದ್ರಶೇಖರ್, ಪಿ.ಕೆ. ನಳಿನಿ, ಲೋಕನಾಥ್ ಉಪಸ್ಥಿತರಿದ್ದರು. ಶೃತಿ. ಹೆಚ್.ಎನ್. ಸ್ವಾಗತಿಸಿ, ನಿರೂಪಿಸಿದರು.