ಶನಿವಾರಸAತೆ, ಜು. ೫: ಸೋಮವಾರಪೇಟೆ ತಾಲೂಕು ಆಡಳಿತ ಕಂದಾಯ ಇಲಾಖೆ ವತಿಯಿಂದ ತಾ. ೧೧ ರಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಪೌತಿ ಖಾತೆ ಆಂದೋಲನ ಶನಿವಾರಸಂತೆ ಹೋಬಳಿ ನಾಡ ಕಚೇರಿಯಲ್ಲಿ ನಡೆಯಲಿದೆ

ಹೋಬಳಿ ವ್ಯಾಪ್ತಿಯ ದುಂಡಳ್ಳಿ ವೃತ್ತಕ್ಕೆ ಸಂಬAಧಿಸಿದ ಕಂದಾಯ ಗ್ರಾಮ ಹಾಗೂ ಉಪ ಗ್ರಾಮಗಳಿಗೆ ಸಂಬAಧಿಸಿದ ರೈತರು ಮತ್ತು ಸಾರ್ವಜನಿಕರು ತಮ್ಮ ಆಸ್ತಿಗಳ ಪೌತಿ ಖಾತೆ ಈವರೆಗೂ ಆಗದಿದ್ದಲ್ಲಿ ಪಹಣಿ, ಮರಣ ಹೊಂದಿದವರ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷದೊAದಿಗೆ ಅರ್ಜಿ ಸಲ್ಲಿಸಬಹುದು ಎಂದು ಶನಿವಾರಸಂತೆ ಹೋಬಳಿ ಕಂದಾಯ ಪರಿವೀಕ್ಷಕ ಮಂಜುನಾಥ್, ಗ್ರಾಮಾಡಳಿತ ಅಧಿಕಾರಿ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.