ವೀರಾಜಪೇಟೆ, ಜು. ೭: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಿಗುವ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಭವಿಷ್ಯವನ್ನು ರೂಪಿಸಿ ಕೊಳ್ಳಬೇಕು ಎಂದು ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್ ಕರೆ ನೀಡಿದರು.

ವೀರಾಜಪೇಟೆ ಕೊಡವ ಸಮಾಜದ ಜಿಮ್ಮಿ ಕಲಾ ವೇದಿಕೆಯಲ್ಲಿ ತ್ರಿವೇಣಿ ಶಾಲೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಗುಣಗಳು ಆರಂಭವಾಗುತ್ತದೆ. ನಾಯಕತ್ವ ಗುಣ ಬೆಳೆಸಿಕೊಂಡರೆ ಮುಂದೆ ರಾಜ್ಯ, ರಾಷ್ಟç ಮಟ್ಟದಲ್ಲಿ ಉತ್ತಮ ನಾಯಕರಾಗಿ ಹೊರ ಹೊಮ್ಮಬಹುದಾಗಿದೆ ಎಂದರು.

ಸಮಾರಂಭವನ್ನು ಉದ್ದೇಶಿಸಿ ತ್ರಿವೇಣಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಅಮ್ಮಣಿಚಂಡ ಗಂಗಮ್ಮ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿವೇಣಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಆಪಾಡಂಡ ಕಾರ್ಯಪ್ಪ ವಹಿಸಿ ಮಾತನಾಡಿದರು.

ಸಮಾರಂಭದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೊಣೇರಿರ ಕಾವೇರಮ್ಮ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರತಿಮಾ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಮಾರಂಭ ದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೊಣೇರಿರ ಕಾವೇರಮ್ಮ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರತಿಮಾ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಮಾರಂಭ ದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ