ಕೂಡಿಗೆ, ಜು. ೭: ೨೦೨೧-೨೨ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಪಡೆದಿರುವ ಕೂಡುಮಂಗಳೂರು ಗ್ರಾಮಪಂಚಾಯಿತಿಗೆ ಪ್ರಶಸ್ತಿ ಪತ್ರ ಮತ್ತು ಫಲಕ ನೀಡಿ ಗೌರವಿಸಲಾಯಿತು.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಪ್ರಶಸ್ತಿ ಸ್ವೀಕರಿಸಿದರು.
ವೇದಿಕೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ, ಮುಖ್ಯ ಲೆಕ್ಕಾಧಿಕಾರಿ, ಯೋಜನಾ ನಿರ್ದೇಶಕರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಇತರರು ಹಾಜರಿದ್ದರು.