ಕೊಡ್ಲಿಪೇಟೆ, ಜು. ೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅಂರ‍್ರಾಷ್ಟಿçÃಯ ಮಾದಕವಸ್ತು ವಿರೋಧಿ ದಿನದ ಪ್ರಯುಕ್ತ ಸ್ಥಳೀಯ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಪವಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆ ಸದಸ್ಯ ಡಿ. ಭಗವಾನ್, ಆರೋಗ್ಯ ಇಲಾಖೆಯ ಮಂಜುಳಾ ಅವರುಗಳು, ಮಾದಕ ವಸ್ತುವಿನ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಯೋಜನೆಯ ವಲಯ ಮೇಲ್ವಿಚಾರಕ ಕೇಶವ, ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಕಾರ್ಯದರ್ಶಿ ಶಂಭುಲಿAಗಪ್ಪ, ಸಾಮಾಜಿಕ ಕಾರ್ಯಕರ್ತ ಇಂದ್ರೋಜಿರಾವ್, ವಿದ್ಯಾಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಅಜಿತ್, ಸಂಭ್ರಮ್, ಪ್ರಮುಖರಾದ ಉದಯ ಮಾಸ್ಟರ್, ಸೋಮಶೇಖರ್, ತಿಮ್ಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.