ಮಡಿಕೇರಿ, ಜು. ೬: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟಿçÃಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಆಗಾಗ ಅಪಘಾತ ಗಳು ಸಂಭವಿಸುತ್ತಿದ್ದು, ಅಪಘಾತ ಗಳನ್ನು ತಡೆಯಲು ಅಗತ್ಯ ಇರುವ ಕಡೆಗಳಲ್ಲಿ ಸೂಚನಾ ಫಲಕ ಅಳವ ಡಿಸುವಂತೆ ಸಂಬAಧಪಟ್ಟ ವಿಭಾಗದ ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಗೆ ರಾಜ್ಯ, ಅಂತರ ರಾಜ್ಯಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಸ್ಥಳೀಯರು ಸೇರಿದಂತೆ ಯಾರಿಗೂ ಯಾವುದೇ ರೀತಿ ತೊಂದರೆಯಾಗದAತೆ ಗಮನಹರಿಸುವುದು ಅತ್ಯಗತ್ಯ. ಪ್ರತಿಯೊಬ್ಬರ ಜೀವ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಅಪಘಾತ ತಡೆಯುವಲ್ಲಿ ಅಗತ್ಯ ಕ್ರಮವಹಿಸಬೇಕಿದೆ.
ರಾಷ್ಟಿçÃಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಫಲಕ ಅಳವಡಿಸುವ ಸಂಬAಧ ಪೊಲೀಸ್ ಇಲಾಖೆಯಿಂದ ಸ್ಥಳದ ಮಾಹಿತಿ ಪಟ್ಟಿ ಪಡೆದು ಕೂಡಲೇ ಆದ್ಯತೆ ಮೇಲೆ ಅಳವಡಿಸು ವಂತಾಗಬೇಕು ಎಂದು ಸೂಚಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮಳೆ ಜೊತೆಗೆ ಮಂಜು ಆವರಿಸುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಫಲಕ ಅಳವಡಿಸುವುದು, ಜೀಬ್ರಾ ಕ್ರಾಸ್ ಬರೆಸುವುದು, ರೈಲಿಂಗ್ಸ್ ನಿರ್ಮಾಣ ಅತ್ಯವಶ್ಯಕವಾಗಿದ್ದು, ಈ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬAಧಪಟ್ಟ ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಕುಶಾಲನಗರದಿಂದ ಸಂಪಾಜೆವರೆಗೆ ಅಷ್ಟಾಗಿ ಸೂಚನಾ ಫಲಕಗಳು ಇಲ್ಲ. ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು.
ಅಪಘಾತ ವಲಯಗಳನ್ನು ಗುರುತಿಸಿ ಫಲಕ ಇಲ್ಲದ ಕಡೆ ಅಳವಡಿಸಬೇಕು. ಶಾಲಾ- ಕಾಲೇಜು ವ್ಯಾಪ್ತಿಯಲ್ಲಿ ಸಂಚಾರಿ ಮಾರ್ಗದ ವಿವರ ಮಾಹಿತಿ ಫಲಕ ಅಳವಡಿಸುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಸಂಚಾರಕ್ಕೆ ಫಲಕ ಅಳವಡಿಸುವುದು, ಜೀಬ್ರಾ ಕ್ರಾಸ್ ಬರೆಸುವುದು, ರೈಲಿಂಗ್ಸ್ ಮತ್ತಿತರ ಕೆಲಸಗಳು ಆಗಬೇಕಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾ ಖೆಯ ಇಇ ಸಿದ್ದೇಗೌಡ, ಜಿ.ಪಂ. ಇಇ ಸುರೇಶ್ ಕುಮಾರ್, ಹೆದ್ದಾರಿ ವಿಭಾಗದ ಸಹಾಯಕ ಎಂಜಿನಿಯರ್ ಹನುಮಂತ ಅವರು ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೆಎಸ್ಆರ್ಟಿಸಿ ಪುತ್ತೂರು ವಿಭಾ ಗದ ಮುಖ್ಯಸ್ಥ ಜಯಕರ ಶೆಟ್ಟಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬಸ್ಗಳಿಗೆ ವೇಗದ ಮಿತಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಎಂ.ಸತೀಶ್ ಕುಮಾರ್, ಕೆಎಸ್ಆರ್ ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ, ಕಾರ್ಮಿಕ ಇಲಾಖಾ ಅಧಿಕಾರಿ ಹರ್ಷವರ್ಧನ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕೆÀ್ತ ನಯನ ಇತರರು ಇದ್ದರು.