ಮಡಿಕೇರಿ, ಜು. ೭: ನಗರಸಭೆ ಸದಸ್ಯ ಕಾಳಚಂಡ ಅಪ್ಪಣ್ಣ ಮೇಲೆ ಗುಂಪೊAದು ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಕೆಲವರನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಇಲ್ಲಿನ ಮೈತ್ರಿ ಜಂಕ್ಷನ್ ಸಮೀಪದ ಹೊಟೇಲ್ಗೆ ಸಂಬAಧಿಸಿದ ಯುವಕ ಮೋನಿಷ್ ಹಾಗೂ ಸಹಚರರು ಅಪ್ಪಣ್ಣ
ಅವರ ಮೇಲೆ ಹಲ್ಲೆಗೈದಿದ್ದಾರೆ
ಎಂದು ಆರೋಪಿಸಿ ನಗರ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ.
ಅಪ್ಪಣ್ಣ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿ ಹೊಟೇಲ್ ವಿಚಾರವನ್ನು ಮುಂದಿಟ್ಟು ಅವರದ್ದೆ ವಾರ್ಡ್ನ ಯುವಕರ ಗುಂಪು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೈದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಾಯಗೊಂಡ ಅಪ್ಪಣ್ಣ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಗರಸಭೆ
ಸದಸ್ಯರು ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಇದರೊಂದಿಗೆ ಹೊಟೇಲ್ ಮಾಲೀಕರಾದ, ಮೋನಿಶ್ ತಾಯಿ ಕೂಡ ಪ್ರತಿದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಖAಡನೆ : ಘಟನೆಯನ್ನು ಮಡಿಕೇರಿ ಕೊಡವ ಸಮಾಜ ಖಂಡಿಸಿದ್ದು ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮಡಿಕೇರಿ ನಗರ ಠಾಣೆಗೆ ಮನವಿ ಸಲ್ಲಿಸಿದೆ.