ಮಡಿಕೇರಿ, ಜು. ೭: ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೩-೨೪ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
೨೦೨೩ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ಕನ್ನಡ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ೨೦೨೩ರ ಆಗಸ್ಟ್ ೩೧ ಕೊನೆಯ ದಿನವಾಗಿದೆ. ೨೦೨೩ರ ಸೆಪ್ಟೆಂಬರ್ ೧೫ ರ ವರೆಗೆ ದಂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಇರುವ ಮಾರಾಟ ಮಳಿಗೆಯಲ್ಲಿ ದಿನಾಂಕ ೦೧-೦೭-೨೦೨೩ ರಿಂದ ಪಡೆಯಬಹುದಾಗಿದೆ. ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ.
ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು- ೫೬೦೦೧೮, ದೂರವಾಣಿ ಸಂಖ್ಯೆ : ೦೮೦-೨೬೬೧೨೯೯೧, ೨೨೪೨೩೮೬೭, ೨೬೬೨೩೫೮೪ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.