ಕೂಡಿಗೆ, ಜು. ೭: ಪೌತಿ ಖಾತೆ ಆಂದೋಲನ ಕಾರ್ಯಕ್ರಮವು ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕುಶಾಲನಗರ ತಾಲೂಕು ಉಪ ತಹಶೀಲ್ದಾರ್ ಮಧುಸೂದನ್ನವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ೬ ಉಪ ಗ್ರಾಮಗಳ ರೈತರು, ಸಾರ್ವಜನಿಕರು ಗ್ರಾಮಸ್ಥರು ಭಾಗವಹಿಸಿ ತಮ್ಮ ತಮ್ಮ ಜಮೀನಿಗೆ ಸಂಬAಧಿಸಿದAತೆ ಕಂದಾಯ ಇಲಾಖೆಯ ಮಾಹಿತಿಯನ್ನು ಪಡೆದುಕೊಂಡರು. ಆಂದೋಲನದ ಕಾರ್ಯಕ್ರಮದಲ್ಲಿ ಹುದುಗೂರು, ಮಲ್ಲೇನಹಳ್ಳಿ, ಮಾದಲಾಪುರ, ಹೆಗ್ಗಡಹಳ್ಳಿ, ಕೂಡಿಗೆ, ಕೋಟೆ, ಕಾಳಿದೇವನ ಹೊಸೂರು, ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದ್ದರು. ಈ ಸಂದರ್ಭ ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೇಗೌಡ, ಅಭಿವೃದ್ಧಿ ಅಧಿಕಾರಿ ಅಂಜನಾ ದೇವಿ ಸೇರಿದಂತೆ ಅನೇಕ ಗ್ರಾಮಸ್ಥರು ಹಾಜರಿದ್ದರು.