ಶಿಕ್ಷೆಗೆ ತಡೆ ನಿರಾಕರಣೆ-ರಾಹುಲ್ ಗಾಂಧಿಗೆ ಹಿನ್ನಡೆ

ನವದೆಹಲಿ, ಜು. ೭: ಮೋದಿ ಉಪನಾಮದ ಹೇಳಿಕೆಗೆ ಸಂಬAಧಿಸಿದAತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರಿದ್ದ ನ್ಯಾಯಾಲಯ ಈ ತೀರ್ಪು ನೀಡಿದೆ. ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್ ಮಧ್ಯ ಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದೆ, ಈ ಮೂಲಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ಅವರು ಏಪ್ರಿಲ್ ಮತ್ತು ಮೇನಲ್ಲಿ ಅರ್ಜಿಯನ್ನು ಆಲಿಸಿದ್ದರು ಹಾಗೂ ಮೇ ೨ ರಂದು ವಾದವನ್ನು ಮುಕ್ತಾಯಗೊಳಿಸಲಾಯಿತು. ರಾಹುಲ್ ಗಾಂಧಿ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು. ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂದಿದ್ದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ಈ ತೀರ್ಪು ನೀಡಿದೆ. ಶುಕ್ರವಾರ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಕೆಳ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ತ್ರಿವಳಿ ರೈಲು ದುರಂತ - ಮೂವರ ಬಂಧನ

ಭುವನೇಶ್ವರ್, ಜು. ೭: ಒಡಿಶಾ ತ್ರಿವಳಿ ರೈಲು ದುರಂತಕ್ಕೆ ಸಂಬAಧಿಸಿ ದಂತೆ ಮೂವರು ರೈಲ್ವೇ ಉದ್ಯೋಗಿಗಳನ್ನು ಸಿಬಿಐ ಶುಕ್ರವಾರ ಬಂಧಿಸಿದೆ. ಹಿರಿಯ ವಲಯ ಎಂಜಿನಿಯರ್ ಅರುಣ್ ಕುಮಾ ಮೋಹಾಂತ್, ವಲಯ ಇಂಜಿನಿಯರ್ ಮೊಹಮದ್ ಅಮಿರ್ ಖಾನ್, ಟೆಕ್ನಿಷೀಯನ್ ಪಪ್ಪು ಕುಮಾ ಎಂಬವರು ಬಂಧಿತರು. ಒಡಿಶಾ ರೈಲ್ವೇ ದುರಂತಕ್ಕೆ ಸಂಬAಧಿಸಿದAತೆ ಮೊದಲ ಬಾರಿಗೆ ಆರೋಪಿಗಳ ಬಂಧನವಾಗಿದೆ. ಇವರ ವಿರುದ್ಧ ಸಿಆರ್‌ಪಿಸಿ ಸೆಕ್ಷನ್ ೩೦೪ ಹಾಗೂ ೨೦೧ ಅಡಿ ಪ್ರಕರಣ ದಾಖಲಿಸಲಾಗಿದೆ. ಜೂನ್ ೨ ರಂದು ಒಡಿಶಾದ ಬಾಲೇಶ್ವರ್ ಜಿಲ್ಲೆಯ ಬಹನಾಗ್ ರೈಲು ನಿಲ್ದಾಣದ ಬಳಿ ಕೊಲ್ಕತ್ತಾದಿಂದ ಚೆನ್ನೆöÊಗೆ ಹೊರಟಿದ್ದ ಕೊರೋಮಂಡಲ್ ಎಕ್ಸ್ಪ್ರೆಸ್ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಇದೇ ಮಾರ್ಗದ ಪಕ್ಕದ ಟ್ರ‍್ಯಾಕ್‌ನಲ್ಲಿ ಸಂಚರಿಸುತ್ತಿದ್ದ ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ರೈಲಿಗೂ ಡಿಕ್ಕಿಯಾಗಿತ್ತು. ಘಟನೆಯಲ್ಲಿ ೨೯೧ ಪ್ರಯಾಣಿಕರು ಮೃತಪಟ್ಟು, ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಮಾನವ ಲೋಪವೇ ಈ ಭೀಕರ ದುರಂತಕ್ಕೆ ಕಾರಣ ಎಂದು ಸಿಬಿಐನ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಉಸ್ತುವಾರಿಗಳಾಗಿ ಪ್ರಲ್ಹಾದ್ ಜೋಶಿ, ಭೂಪೇಂದರ್ ಯಾದವ್ ನೇಮಕ

ನವದೆಹಲಿ, ಜು. ೭: ೨೦೨೪ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಪ್ರಮುಖ ರಾಜ್ಯಗಳ ಚುನಾವಣೆಗೆ ಪ್ರಚಾರವನ್ನು ಚುರುಕುಗೊಳಿಸಿರುವ ಬಿಜೆಪಿ, ರಾಜಸ್ಥಾನ ಉಸ್ತುವಾರಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ಮತ್ತು ಮಧ್ಯ ಪ್ರದೇಶ ಉಸ್ತುವಾರಿಯಾಗಿ ಭೂಪೇಂದರ್ ಯಾದವ್ ಅವರನ್ನು ಶುಕ್ರವಾರ ನೇಮಕ ಮಾಡಿದೆ. ಗುಜರಾತ್‌ನ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಹರಿಯಾಣ ನಾಯಕ ಕುಲದೀಪ್ ಬಿಷ್ಣೋಯ್ ಅವರನ್ನು ರಾಜಸ್ಥಾನ ಚುನಾವಣೆಗೆ ಸಹ ಉಸ್ತುವಾರಿಗಳನ್ನಾಗಿ ಮತ್ತು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಛತ್ತೀಸ್‌ಗಢದ ಸಹ ಉಸ್ತುವಾರಿಯಾಗಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮಧ್ಯ ಪ್ರದೇಶದ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಪಕ್ಷದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಅವರನ್ನು ತೆಲಂಗಾಣದ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರೈಲಿನಲ್ಲಿ ಬೆಂಕಿ ಅವಘಡ

ಹೈದರಾಬಾದ್, ಜು. ೭: ಹೌರಾ-ಸಿಕಂದರಾಬಾದ್ ಫಲಕ್‌ನುಮಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ೩ ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತೆಲಂಗಾಣದ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹಾರಿದ್ದಾರೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ರೈಲಿನ ಮೂರು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸಿಬ್ಬಂದಿ ರೈಲು ನಿಲ್ಲಿಸಿ ಎರಡೂ ಬೋಗಿಗಳಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಯಾವುದೇ ಪ್ರಯಾಣಿಕರಿಗೂ ಪ್ರಾಣಹಾನಿಯಾಗಿಲ್ಲ. ಬೆಂಕಿ ಅನಾಹುತ ಸಂಭವಿಸಿದ ತಕ್ಷಣವೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಇತರ ಬೋಗಿಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲು ಅಧಿಕಾರಿಗಳು ಬೋಗಿಗಳನ್ನು ಬೇರ್ಪಡಿಸಿದ್ದಾರೆ. ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದರಿಂದ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸುವುದು ಕಷ್ಟಕರವಾಗಿತ್ತು.