ಬೆAಗಳೂರು, ಜು. ೭: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ೭ನೇ ಬಾರಿಗೆ ಹಾಗೂ ಈ ಹಿಂದೆ ಅರ್ಥ ಸಚಿವರಾಗಿದ್ದಾಗಿನÀ ಸಂದರ್ಭವೂ ಸೇರಿದಂತೆ ದಾಖಲೆಯ ೧೪ನೇ ಬಾರಿಗೆ ರಾಜ್ಯದ ಬಜೆಟ್ ಅನ್ನು ಇಂದು ಸದನದಲ್ಲಿ ಮಂಡಿಸಿದರು. ಒಟ್ಟು ಪೂರ್ಣ ಪ್ರಮಾಣದ ೩ ಲಕ್ಷ ೨೭ ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದೆ. ಇದರಲ್ಲಿ ೫ ಗ್ಯಾರಂಟಿ ಯೋಜನೆಗಳೂ ಒಳಗೊಂಡಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಮುಂದಿನ ಆಡಳಿತಾವಧಿಯಲ್ಲಿ ಹಲವು ಕ್ಷೇತ್ರಗಳ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಬೊಕ್ಕಸಕ್ಕೆ ೧,೮೨,೫೦೦ ಕೋಟಿ ರೂಪಾಯಿ ಸಂಗ್ರಹಣೆಯ ಗುರಿಯನ್ನು ಅವರು ಈ ಸಂದರ್ಭ ಪ್ರಕಟಿಸಿದರು.

೨೦೨೩-೨೪ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ ಗುರಿಯನ್ನು ೧,೦೧,೦೦೦ ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ. ಮದ್ಯದ ಎಲ್ಲಾ ೧೮ ಘೋಷಿತ ಬೆಲೆ ಸ್ಲಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ಹಾಲಿ ಇರುವ ದರಗಳ ಮೇಲೆÀ ಮತ್ತೆ ಅಧಿಕವಾಗಿ ಶೇ.೨೦ರಷ್ಟು ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ಅಲ್ಲದೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ ೨೦೨೩-೨೪ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ ೩೬,೦೦೦ ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ೨೫,೦೦೦ ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ. ಅದೇ ರೀತಿ ಸಾರಿಗೆ ಇಲಾಖೆಗೆ ಒಟ್ಟು ೧೧,೫೦೦ ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ೯,೦೦೦ ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸ ಲಾಗಿದೆ. ಬಜೆಟ್ ಮಂಡನೆಯಲ್ಲಿನ ಇತರ ಪ್ರಮುಖ ಅಂಶಗಳು ಈ ರೀತಿ ಇವೆ. ಕೃಷಿ

ಟಿ ಕೃಷಿ ಭಾಗ್ಯ ಯೋಜನೆ ರೂ. ೧೦೦ ಕೋಟಿ ವೆಚ್ಚದಲ್ಲಿ ಮರುಜಾರಿ.

ಟಿ ನವೋದ್ಯಮ ಹೊಸ ಯೋಜನೆಯಡಿ ಕೃಷಿ ಉದ್ಯಮಿಗಳಿಗೆ ನಾವಿನ್ಯತೆ ಪ್ರೋತ್ಸಾಹಿಸಲು ರೂ.೧೦ ಕೋಟಿ ನೆರವು.

ಟಿ ರೈತ ಉತ್ಪಾದಕ ಸಂಸ್ಥೆಗಳ ಕೃಷಿ ಉತ್ಪನ್ನಗಳ ಏಕೀಕೃತ ಬ್ರಾಂಡಿAಗ್‌ಗಾಗಿ ರೂ.೧೦ ಕೋಟಿ.

ಟಿ ಹಿಂದುಳಿದ ತಾಲೂಕುಗಳ ೧೦೦ ರೈತ ಉತ್ಪಾದಕ ಸಂಸ್ಥೆಗಳಿಗೆ ತಲಾ ರೂ.೨೦ ಲಕ್ಷ ವರೆಗಿನ ಸಾಲಕ್ಕೆ ಶೇ.೪ ರ ಬಡ್ಡಿ ಸಹಾಯಧನ.

(ಮೊದಲ ಪುಟದಿಂದ)

ಕೃಷಿ

ಟಿ ರೈತ ಉತ್ಪಾದಕ ಸಂಸ್ಥೆಗಳು ಉತ್ಪಾದಿಸುವ ಗೋದಾಮು, ಶೀತಲಗೃಹ ನಿರ್ಮಾಣ ಮತ್ತಿತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. ೨೦ ರಷ್ಟು, ರೂ ೧ ಕೋಟಿ ಮೀರದಂತೆ ಸ್ಪೀಡ್ ಕ್ಯಾಪಿಟಲ್

ಟಿ ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಉತ್ತೇಜನಕ್ಕೆ ರೂ.೫ ಕೋಟಿ.

ಟಿ ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ ರೂ. ೫ ಲಕ್ಷಕ್ಕೆ ಹೆಚ್ಚಳ

ಟಿ ಕೃಷಿ ಕೇಂದ್ರಗಳನ್ನು ಬಲಪಡಿಸಲು ೧೦೦ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ರೂ.೫೦ ಕೋಟಿ ಅನುದಾನ.

ಟಿ ಜಿ.ಐ ಟ್ಯಾಗ್ ಹೊಂದಿರುವ ಕಾಫಿ, ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆಗಳ ಉತ್ಪಾದನೆಗೆ, ಸಂಶೋಧನೆಗೆ ಮಾರುಕಟ್ಟೆ ಮತ್ತು ಬ್ರಾಂಡಿAಗ್‌ಗೆ ಕ್ರಮ.

ಟಿ ವಾಣಿಜ್ಯ ಹೂವಿನ ರಫ್ತು ಉತ್ತೇಜನ.

ಟಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ.

ಟಿ ನಂದಿನಿ ವಿಸ್ತರಣೆಗೆ ಕ್ರಮ

ಟಿ ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು.

(ಮೊದಲ ಪುಟದಿಂದ)

ಕೊಡಗಿಗೆ ಪೂರಕವಾದದ್ದು

ಹೊಸ ಏರ್‌ಸ್ಟಿçಫ್

ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಹಾಗೂ ವಿಪತ್ತು ನಿರ್ವಹಣೆಯ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಂಗಳೂರಿನಲ್ಲಿ ಹೊಸ ಏರ್‌ಸ್ಟಿçಫ್‌ಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು.

ರೂ. ೭೨೧ ಕೋಟಿಯ ಪ್ರಸ್ತಾವನೆ

ಪ್ರಾಕೃತಿಕ ವಿಕೋಪದ ನಿಯಂತ್ರಣ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳನ್ನು ಬಲಪಡಿಸಲು ನ್ಯಾಷನಲ್ ಡಿಸಾಸ್ಟರ್ ಮಿಟಿಗೇಷನ್ ಫಂಡ್ (ಓಆಒಈ) ಮೂಲಕ ರೂ.೭೨೧ ಕೋಟಿಯ ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಬೆಂಗಳೂರಿನಲ್ಲಿ ಪ್ರವಾಹ ನಿಯಂತ್ರಣ ಕೊಡಗು ಸೇರಿದಂತೆ ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಗಳಲ್ಲಿನ ಭೂಕುಸಿತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ

ಈ ೨೫೦ ರೊಳಗೆ Uಟಿiveಡಿsiಣಥಿ ಖಚಿಟಿಞiಟಿg ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಕೈಗೊಳ್ಳುವ ಸಲುವಾಗಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಕ್ಕನುಗುಣವಾಗಿ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ನೀಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ೩೬ ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಈISಇಅ ಸಂಸ್ಥೆಯಲ್ಲಿ Ph.ಆ. ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು ಎರಡು ಕೋಟಿ ರೂ. ಅoಡಿಠಿus ಈuಟಿಜ ನೀಡಲಾಗುವುದು.

ಈ`ಸ್ವಾವಲಂಬಿ ಸಾರಥಿ' ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.೭೫ ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.

ಈಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿAದ ಸಾಲ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಎರಡು ಕೋಟಿ ರೂ.ವರೆಗೆ ಸರ್ಕಾರದಿಂದ ಸಮಾನಾಂತರ ಖಾತ್ರಿ ನೀಡುವ ಯೋಜನೆ ಜಾರಿಯಲ್ಲಿದ್ದು, ಸಮಾನಾಂತರ ಖಾತ್ರಿಯನ್ನು ರಾಷ್ಟಿçÃಕೃತ ಬ್ಯಾಂಕ್‌ಗಳಿAದ ಪಡೆಯುವ ಸಾಲಕ್ಕೂ ವಿಸ್ತರಿಸಲಾಗುವುದು.

ಈಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಡಿ (ಇಡಿಪಿ) ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.

ಈಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದು ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುವುದು.

ಈಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ವಾಣಿಜ್ಯ ಬ್ಯಾಂಕ್‌ಗಳಿAದ ಪಡೆಯುವ ಸಾಲಕ್ಕೆ ಗರಿಷ್ಠ ಶೇ.೨೦ರಷ್ಟು ಅಥವಾ ಒಂದು ಲಕ್ಷ ರೂ.ಗಳು ಮೀರದಂತೆ ಸಾಲ ಸಹಾಯಧನ ನೀಡಲಾಗುವುದು.

ಅಲ್ಪಸಂಖ್ಯಾತರ ಅಭಿವೃದ್ಧಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (೧ ರಿಂದ ೮ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿದ್ದು, ಈ ಯೋಜನೆಯನ್ನು ಮುಂದುವರೆಸಲು ರೂ.೬೦ ಕೋಟಿ ಅನುದಾನವನ್ನು ಒದಗಿಸಲಾಗುವುದು.

ರಾಜ್ಯದ ೬೨ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ೬ನೇ ತರಗತಿಯಿಂದ ೧೨ನೇ ತರಗತಿಯವರೆಗೆ Iಟಿಣegಡಿಚಿಣeಜ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರಿಂದ ೧೩,೦೦೦ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ೩೦ ಕೋಟಿ ರೂ.ಗಳನ್ನು ಒದಗಿಸಲಾಗುವುದು. ಇದಲ್ಲದೇ, ೫೦ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ ೧೨,೫೦೦ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ರೂ.೨೩ ಕೋಟಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ೧೦ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ರಾಜ್ಯದಲ್ಲಿ ೨೦೦ ಮೌಲಾನಾ ಆಜಾದ್ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಶೇ.೭೫ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ ೨೨ ಶಾಲೆಗಳಲ್ಲಿ ಶೇ.೧೦೦ ರಷ್ಟು ಫಲಿತಾಂಶ ಬಂದಿರುತ್ತದೆ. ಮೌಲಾನಾ ಆಜಾದ್ ಶಾಲೆಗಳ ಉತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ, ಇವುಗಳ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಸ್ವಂತ ಕಟ್ಟಡ ಇಲ್ಲದೇ ಇರುವ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿAಗ್, ವೈದ್ಯಕೀಯ ಮುಂತಾದ ೨೮ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಲು ಶೇ.೨ ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುವುದು. ಪ್ರಸಕ್ತ ಸಾಲಿನಲ್ಲಿ ೭೫ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯಗಳನ್ನು ರೂ.೫ ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ಓಇಇಖಿ, ಎಇಇ, ಅಇಖಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿAದ ಎರಡು ವರ್ಷಗಳ ತರಬೇತಿಯನ್ನು ನೀಡಲು ಎಂಟು ಕೋಟಿ ರೂ.ಗಳ ಅನುದಾನ ನೀಡಲಾಗುವುದು.

ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ ೧೦ ತಿಂಗಳ ವಸತಿಸಹಿತ IಂS/ಏAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ ೨೫೦ ರೊಳಗೆ Uಟಿiveಡಿsiಣಥಿ ಖಚಿಟಿಞiಟಿg ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ ೨೦ ಲಕ್ಷ ರೂ. ಸಾಲ ಸೌಲಭ್ಯ ಒದಗಿಸಲಾಗುವುದು.

ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ೧೦,೦೦೦ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿAದ ಪಡೆಯುವ ಸಾಲ ಮೊತ್ತದ ಶೇ. ೨೦ ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನವನ್ನು ನೀಡಲಾಗುವುದು.

`ಸ್ವಾವಲಂಬಿ ಸಾರಥಿ' ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.೫೦ ರಷ್ಟು, ಗರಿಷ್ಠ ೩ ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.

ಈ ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಈ ಭವನಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ ೧೨೬ ಶಾದಿ ಮಹಲ್ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು ರೂ.೫೪ ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.

ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್ ಮೊತ್ತವನ್ನು ೪೮,೦೦೦ ರೂ.ಗಳಿಂದ ೬೦,೦೦೦ ರೂ.ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ತಸ್ತಿಕ್ ಪಡೆಯುತ್ತಿರುವ ೮೬೮ ಸಂಸ್ಥೆಗಳಿಗೆ ಅನುಕೂಲವಾಗಲಿದೆ.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ ೩೬೦ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.

ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ೨೫ ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

ನಾಡಿನ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ರೂ.೧೦೦ ಕೋಟಿ ಅನುದಾನ ನೀಡಲಾಗುವುದು.

ರಾಜ್ಯದಲ್ಲಿ ೪೦,೦೦೦ ಕ್ಕಿಂತಲೂ ಅಧಿಕ ವಕ್ಛ್ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ ೨೦೨೩-೨೪ನೇ ಸಾಲಿನಲ್ಲಿ ರೂ.೫೦ ಕೋಟಿ ಒದಗಿಸಲಾಗುವುದು.

ಮೀನುಗಾರಿಕೆ / ಇತರೆ

v ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ವಿಪುಲ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು.

v ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು.

v ಸಹಕಾರ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ.

v ರಾಜ್ಯದ ಆಯ್ದ ೫೦ ಮಾರುಕಟ್ಟೆಗಳಲ್ಲಿ ಮಿನಿ ಶೀತಲಗೃಹಗಳ ನಿರ್ಮಾಣಕ್ಕೆ ಕ್ರಮ.

v `ಕಾಯಕ ನಿಧಿ' ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು ೧೦,೦೦೦ ರೂ. ಗಳಿಂದ ೨೫,೦೦೦ ರೂ. ಗಳಿಗೆ ಹೆಚ್ಚಿಸಲಾಗುವುದು.

ನೀರಾವರಿ

v ಜಲ ಸಂಪನ್ಮೂಲ ಇಲಾಖೆಯಡಿ ಮಂದಗತಿಯಲ್ಲಿ ಸಾಗುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸುವುದರೊಂದಿಗೆ ಪ್ರಸಕ್ತ ಸಾಲಿನಲ್ಲಿ ೯೪೦ ಕೋಟಿ ರೂ. ಬಾಕಿ ಮೊತ್ತದ ೧೦ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಸುಮಾರು ೨೫,೯೪೮ ಹೆಕ್ಟೇರ್ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗುವುದು. ವೈದ್ಯಕೀಯ ಶಿಕ್ಷಣ

್ಡ ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ೪೫೦ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ೪೫೦ ಬೆಡ್ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.

್ಡ ಓIಒಊಂಓS ಸಂಸ್ಥೆಯ ಆವರಣದಲ್ಲಿ ೧೪೬ ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾAಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್ ಆಲ್ಕೋಹಾಲಿಕ್ ಫ್ಯಾಟಿ ಲಿವರ್ ಖಾಯಿಲೆಯ (ಓಂಈಐಆ) ರೋಗಿಗಳಲ್ಲಿ ಸಿರೋಸಿಸ್ ಮತ್ತು ಕ್ಯಾನ್ಸರ್ ಪತ್ತೆ ಹಚ್ಚಲು ಒಂದು ಈibಡಿoSಛಿಚಿಟಿ ಅನ್ನು ಒದಗಿಸಲಾಗುವುದು.

್ಡ ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (ಏiಜತಿಚಿi ಒemoಡಿiಚಿಟ Iಟಿsಣiಣuಣe oಜಿ ಔಟಿಛಿoಟogಥಿ) ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ ೨೦ ಕೋಟಿ ರೂ. ಒದಗಿಸಲಾಗುವುದು. ಆರೋಗ್ಯ

ಟ ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಹಠಾತ್ ಹೃದಯ ಸಂಬAಧಿ ಸಾವುಗಳನ್ನು ತಡೆಗಟ್ಟಲು ಚಿuಣomಚಿಣeಜ exಣeಡಿಟಿಚಿಟ ಜeಜಿibಡಿiಟಟಚಿಣoಡಿs ಗಳನ್ನು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ

ಟ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಏಕ ಬಳಕೆಯ ಡಯಾಲೈಸರ್ ಒದಗಿಸಲು ಹಾಗೂ ಡಯಾಲಿಸಿಸ್ ಕೇಂದ್ರಗಳನ್ನು ೧೭೩ ಯಿಂದ ೨೧೯ಕ್ಕೆ ಹೆಚ್ಚಿಸಲು ರೂ. ೯೨ ಕೋಟಿ.

ಟ ಕೈಚಾಲಿತ ಎಕ್ಸ್-ರೆ ಉಪಕರಣಗಳಿಗೆ ರೂ.೩ ಕೋಟಿ ಅನುದಾನ

ಟ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ , ಮನೆಬಾಗಿಲಿಗೆ ಔಷಧಿ ವಿತರಣೆ, ೮ ಜಿಲ್ಲೆಗಳಲ್ಲಿ ಜಾರಿ.

ಟ ಹೆಣ್ಣುಮಕ್ಕಳ ರಕ್ತಹೀನತೆ ಮತ್ತು ಅಪೌಷ್ಟಿಕತೆ ನಿವಾರಿಸುವ ಕಾರ್ಯಕ್ರಮಕ್ಕೆ ರೂ.೨೫ ಕೋಟಿ ಅನುದಾನ.

ಟ ರಾಜ್ಯದಲ್ಲಿ ಉನ್ನತೀಕರಿಸಲಾದ ೨೩ ಸಮುದಾಯ ಆರೋಗ್ಯ ಕೇಂದ್ರಗಳನ್ನು ಕಾರ್ಯಗತಗೊಳಿಸಲು ಅಗತ್ಯ ಸೌಲಭ್ಯ ಒದಗಿಸಲು ರೂ.೭೦ ಕೋಟಿ ಅನುದಾನ.

ಟ ರೂ. ೮ ಕೋಟಿ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯ ಸ್ಥಾಪನೆ.‘ಐತಿಹಾಸಿಕ ಬಜೆಟ್’

ಪಂಚ ಗ್ಯಾರಂಟಿ ಅನುಷ್ಠಾನದ ನಡುವೆ ಐತಿಹಾಸಿಕ ಬಜೆಟ್ ಅನ್ನು ರಾಜ್ಯ ಸರಕಾರ ಮಂಡಿಸಿದೆ. ಕಳೆದ ಬಜೆಟ್‌ನಲ್ಲಿ ಮಂಡಿಸಿದಕ್ಕಿAತ ಮೀರಿ ಹಣ ವಿನಿಯೋಗವಾಗಿದೆ. ಈ ಹಿನ್ನೆಲೆ ರಾಜ್ಯ ಬೊಕ್ಕಸ ಖಾಲಿಯಾಗಿತ್ತು. ಇವೆಲ್ಲ ಒತ್ತಡಗಳ ನಡುವೆ ಎಲ್ಲಾ ವರ್ಗ ಜನರ ಶ್ರೇಯೋಭಿವೃದ್ಧಿಯನ್ನು ಗಣನೆಗೆ ತೆಗೆದುಕೊಂಡು ಅಭಿವೃದ್ಧಿ ಪರ ಬಜೆಟ್ ಹೊರಹೊಮ್ಮಿದೆ.

ಕಾಫಿ ಬ್ರಾö್ಯಂಡ್, ಮಳೆಹಾನಿ ತಡೆ ತಂತ್ರಜ್ಞಾನ ಸೇರಿದಂತೆ ವಿವಿಧ ಯೋಜನೆಗೆ ಕೊಡಗಿಗೆ ಪೂರಕವಾಗಿದೆ. ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಹಣ ಮೀಸಲಿಡಲಾಗಿದೆ. ಬುಡಕಟ್ಟು, ಪರಿಶಿಷ್ಟ ಜಾತಿ, ಹಿಂದುಳಿದ ವರ್ಗದವರಿಗೆ ವಸತಿ ಒದಗಿಸುವ ಯೋಜನೆ ಕೊಡಗಿನ ಜನರಿಗೆ ಉಪಯೋಗವಾಗಲಿದೆ. ಮುಂದಿನ ೫ ವರ್ಷಗಳಲ್ಲಿ ಮತ್ತಷ್ಟು ಉತ್ತಮ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲಿದೆ.

- ಅಜ್ಜಿಕುಟ್ಟೀರ ಪೊನ್ನಣ್ಣ, ವೀರಾಜಪೇಟೆ ಶಾಸಕ

‘ಸರ್ವರಿಗೂ ಸಮಪಾಲು, ಸಮಬಾಳು’

ಜಿಲ್ಲಾಸ್ಪತ್ರೆಯಲ್ಲಿ ೪೫೦ ಹಾಸಿಗೆ ಸಾಮರ್ಥ್ಯದ ಕಟ್ಟಡ ಪೂರ್ಣಗೊಳಿಸಲು ಬಜೆಟ್‌ನಲ್ಲಿ ಪ್ರಾತಿನಿಧ್ಯ ನೀಡಿರುವುದು ಖುಷಿಯ ವಿಚಾರ. ಹಲವು ಯೋಜನೆಗಳು ಕೊಡಗಿಗೆ ಪೂರಕವಾಗಿದೆ. ಜನಪರವಾದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ. ಸರ್ವರಿಗೂ ಸಮಪಾಲು, ಸಮಬಾಳು ಧ್ಯೇಯೋದ್ಧೇಶದಡಿ ಬಜೆಟ್ ರೂಪುಗೊಂಡಿದೆ.

- ಡಾ. ಮಂಥರ್ ಗೌಡ, ಮಡಿಕೇರಿ ಶಾಸಕ

‘ನಿರಾಶದಾಯಕ’

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗಿನ ರಸ್ತೆಗಳ ಅಭಿವೃದ್ಧಿಗೆ ಹಾಗೂ ಮಾನವ ಮತ್ತು ಆನೆ ಸ�