ಸಿದ್ದಾಪುರ, ಜು. ೮: ಅಮ್ಮತ್ತಿ ಹೋಬಳಿಗೆ ಸೇರಿದ ಗ್ರಾಮಗಳಿಗೆ ಸಂಬAಧಿಸಿದ ಪೌತಿ ಖಾತೆ ಆಂದೋಲನಕ್ಕೆ ಮಂಗಳವಾರ ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಅಮ್ಮತ್ತಿ ಹೋಬಳಿ ವ್ಯಾಪ್ತಿಗೆ ಸೇರಿದ ವಿವಿಧ ಗ್ರಾ.ಪಂ. ನಿವಾಸಿಗಳ ಅನುಕೂಲಕ್ಕಾಗಿ ಅಮ್ಮತ್ತಿ ನಾಡು ಕಚೇರಿಯಲ್ಲಿ ಪೌತಿ ಖಾತೆ ಆಂದೋಲನ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ನಿಗದಿಪಡಿಸಿದ ದಿನಾಂಕದAದು ಕಚೇರಿಗೆ ಆಗಮಿಸಿ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.