ಸೋಮವಾರಪೇಟೆ, ಜು. ೭: ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್‌ನ ಆಶ್ರಯದಲ್ಲಿ ಬೆಂಗಳೂರಿನ ಪ್ರಣವ್ ಫೌಂಡೇಷನ್‌ನ ಸಹಯೋಗದೊಂದಿಗೆ ಸ್ಥಳೀಯ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಗೆ ೫ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.

ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲ್ಯಾಪ್‌ಟಾಪ್‌ಗಳನ್ನು ಹಸ್ತಾಂತರಿಸಿ ಮಾತನಾಡಿದ ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್‌ನ(ಯಿಫಾ) ಅಧ್ಯಕ್ಷ, ಹೈಕೋರ್ಟ್ ವಕೀಲ ಶ್ರೀನಿಧಿ ಲಿಂಗಪ್ಪ ಅವರು, ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣದಲ್ಲಿ ಇಳಿಕೆ ಯಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲೂ ಮೌಲ್ಯಾಧಾರಿತ ಶಿಕ್ಷಣ ಲಭ್ಯವಾಗುತ್ತಿದೆ. ಜ್ಞಾನ ಹೆಚ್ಚಿಸುವುದೇ ಶಿಕ್ಷಣದ ಮೂಲ ಉದ್ದೇಶವಾಗಿದ್ದು, ಸಂಸ್ಕಾರಯುತ ಶಿಕ್ಷಣವನ್ನು ಆರಂಭದಲ್ಲಿಯೇ ಮಕ್ಕಳಿಗೆ ನೀಡಬೇಕಿದೆ ಎಂದು ಅಭಿಪ್ರಾಯಿಸಿದರು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸಮಾಜದ ಉನ್ನತ ಹುದ್ದೆಗೇರಿರುವ ಸಾಕಷ್ಟು ನಿದರ್ಶನಗಳಿವೆ. ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮುಂದಾಗಬೇಕಿದೆ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಸಹ ಪ್ರಾಥಮಿಕ ಹಂತದಿAದಲೇ ಕಂಪ್ಯೂಟರ್ ಜ್ಞಾನವನ್ನು ಹೊಂದಬೇಕೆAಬ ಉದ್ದೇಶದಿಂದ ಪ್ರಣವ್ ಫೌಂಡೇಷನ್ ಮೂಲಕ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗಿದೆ ಎಂದರು. ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಮಾತನಾಡಿ, ಯಿಫಾ ಸಂಘಟನೆಯು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ೨೦೧೮ರ ಭೂಪ್ರಳಯ, ನಂತರ ಎದುರಾದ ಕೊರೊನಾ ಸಂದರ್ಭ ಸಂಘಟನೆಯ ಸದಸ್ಯರು ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ಇದೀಗ ಸರ್ಕಾರಿ ಶಾಲೆಗೆ ಲ್ಯಾಪ್‌ಟಾಪ್ ನೀಡಿರುವುದು ಪ್ರಶಂಸನೀಯ ಎಂದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್, ಯಿಫಾ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಜನ್ ಮಂದಣ್ಣ, ಸಲಹೆಗಾರ ಜೀವನ್, ಸದಸ್ಯ ಜನಾರ್ಧನ್, ರಕ್ಷಿತ್, ಪ್ರಾಂಶುಪಾಲೆ ಪುಷ್ಪ ಸೇರಿದಂತೆ ಇತರರು ಹಾಜರಿದ್ದರು.