ಮಡಿಕೇರಿ, ಜು. ೭: ೨೦೨೨-೨೩ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕ ವಿನಾಯಿತಿ ಸೌಲಭ್ಯಕ್ಕೆ’ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೧೭ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೫ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ ಠಿosಣmಚಿಣಡಿiಛಿheಟಠಿ@ ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.