ಮಡಿಕೇರಿ, ಜು. ೭: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬAಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ತಾ. ೩೦ ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಹೋಂ-ಸ್ಟೇ ನೋಂದಣಿಗೆ ನಿಗದಿಪಡಿಸಲಾಗಿರುವ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಡಾ. ಯತೀಶ ಉಲ್ಲಾಳ ತಿಳಿಸಿದ್ದಾರೆ.
೨೦೧೫-೨೦ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ಪರವಾನಿಗೆ ನೀಡಿರುವ ಪರವಾನಿಗೆ ಅವಧಿಯು ೫ ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬAಧಿಸಿದAತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ಜಾಲ ತಾಣ hಣಣಠಿ://ಞಚಿಡಿಟಿಚಿಣಚಿಞಚಿಣouಡಿism.oಡಿg/ ಅಥವಾ hಣಣಠಿs://ಞಣಣಜಿ. ಞಚಿಡಿಟಿಚಿಣಚಿಞಚಿಣouಡಿism.oಡಿg/ ಮುಖಾಂತರ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದೆ.
ಆನ್‌ಲೈನ್‌ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ, ಕೊಠಡಿ ಛಾಯಾಚಿತ್ರಗಳು, ಹೋಂ-ಸ್ಟೇ ಮಾಲೀಕತ್ವದ ದಾಖಲಾತಿ, ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ನಿರಾಕ್ಷೇಪಣಾ ಪತ್ರ, ಸ್ಥಳೀಯ ಸಂಸ್ಥೆಯವರುಗಳು ನೀಡಿರುವ ನಿರಾಕ್ಷೇಪಣಾ ಪತ್ರ. ವಾಸಸ್ಥಳ ದೃಢೀಕರಣ ಪತ್ರ, ನೋಂದಣಿ ಶುಲ್ಕದೊಂದಿಗೆ ಸ್ಕಾö್ಯನ್ ಮಾಡಿದ ದಾಖಲಾತಿಗಳನ್ನು ಅಂತರ್ಜಾಲ ತಾಣದಲ್ಲಿ ಅಪ್‌ಲೋಡ್ ಮಾಡಬೇಕು. ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕ್ರಮ ಜರುಗಿಸಲಾಗುವುದು ಎಚ್ಚರಿಸಿದ್ದಾರೆ.
ಈಗಾಗಲೇ ಪರವಾನಿಗೆ ಪಡೆದು ಹೋಂ-ಸ್ಟೇ ನಡೆಸುತ್ತಿರುವ ಮಾಲೀಕರು ಬರುವಂತಹ ಅತಿಥಿಗಳ ವಾಹನ ಸಂಖ್ಯೆ, ಗುರುತಿನ ಚೀಟಿಯ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು. ಹೋಂ-ಸ್ಟೇಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಅನಧಿಕೃತ ಚಟುವಟಿಕೆಗಳನ್ನು ನಡೆಸಬಾರದು. ಹೋಂ-ಸ್ಟೇಗಳಲ್ಲಿ ಬಳಸುವಂತಹ ಗ್ಯಾಸ್ ಗೀಸರ್/ ಕರೆಂಟ್ ಗೀಸರ್‌ಗಳನ್ನು ಕಾಲಕಾಲಕ್ಕೆ ಸರಿಯಾಗಿ ನಿರ್ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಹೋಂ-ಸ್ಟೇನಲ್ಲಿ ಅಳವಡಿಸುವುದು.
ಹೋಂ-ಸ್ಟೇನಲ್ಲಿರುವ ಸಿ.ಸಿ.ಟಿವಿಯ ೪೫ ದಿನಗಳ ಫುಟೇಜ್‌ಗಳನ್ನು ಸಂಗ್ರಹಿಸಿಟ್ಟು ಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾರಂಗಿ ಹಿನ್ನೀರಿನ ಹಾಗೂ ಬಾಕ್ ವಾಟರ್ ಹಾಗೂ ಕಾವೇರಿ ನದಿ ದಂಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಮಳೆಗಾಲ ಸಮಯದಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವುದು. ಈ ಮಾನದಂಡ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಡಾ. ಯತೀಶ್ ಎಚ್ಚರಿಸಿದ್ದಾರೆ.
ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧಿಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ:೦೮೨೭೨-೨೦೦೫೧೯ ಅಥವಾ ಈ-ಮೇಲ್ : ಚಿಜಞoಜಚಿguಣouಡಿism@gmಚಿiಟ.ಛಿom ಗೆ ತಿಳಿಸಬಹುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.