ಮಡಿಕೇರಿ, ಜು. ೮ : ಮಡಿಕೇರಿ ನಗರಸಭೆ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲೆ ನಿನ್ನೆ ನಡೆದ ಹಲ್ಲೆ ಯನ್ನು ಕೊಡಗು ಜಿಲ್ಲಾ ಬಿಜೆಪಿ ಖಂಡಿಸಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿದರು. ಮೈತ್ರಿ ಜಂಕ್ಷನ್ ಬಳಿ ಇರುವ ಹೊಟೇಲ್ ಹಾಗೂ ಮನೆಗೆ ಮಳೆಯಿಂದಾಗಿ ನೀರು ನುಗ್ಗಿದ್ದ ಸಂದರ್ಭ ನಗರ ಸಭೆಯಿಂದ ಮಾಡಬೇಕಾದ ಕೆಲಸ ಗಳನ್ನು ಕೂಡಲೇ ಮಾಡಲಾಗಿದೆ. ಹೀಗಿದ್ದರೂ ಕೂಡ ನಗರಸಭಾ ಸದಸ್ಯ ಅಪ್ಪಣ್ಣ ಅವರ ಮೇಲೆ ಹಲ್ಲೆ ಮಾಡಿರುವುದು ಹೇಯ ಕೃತ್ಯ ಎಂದು ಹೇಳಿದರು. ಇಂತಹ ಘಟನೆಗಳು ಮರುಕಳಿಸಬಾರದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ಜನಪ್ರತಿನಿಧಿಗಳಿಗೆ ರಕ್ಷಣೆ ನೀಡಬೇಕು ಎಂದು ರಾಬಿನ್ ದೇವಯ್ಯ ಆಗ್ರಹಿಸಿದರು.

ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಈ ಹಲ್ಲೆ ಪ್ರಕರಣದ ತನಿಖೆ ನಡೆಸಿ ಭಾಗಿಯಾಗಿರುವ ಎಲ್ಲರನ್ನು ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು. ಆ ಕ್ಯಾಂಟಿನ್‌ಗೆ ಸಂಬA ಧಿಸಿದಂತೆ ಫಾರಂ ನಂ. ೩ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅಗತ್ಯ ದಾಖಲಾ ತಿಗಳನ್ನು ಕೇಳಿದ್ದೇವೆ. ದಾಖಲೆ ನೀಡಿದರೆ ಫಾರಂ-೩ ವಿತರಿಸಲು ಸಾಧ್ಯವಾಗುತ್ತದೆ. ದಾಖಲಾತಿಗಳನ್ನು ನೀಡದಿದ್ದರೆ ಅಸಾಧ್ಯ ಎಂದು ಅನಿತಾ ಪೂವಯ್ಯ ಪ್ರಶ್ನೆಯೊಂದಕ್ಕೆ ಉತ್ತರಿ ಸಿದರು. ಮಳೆಗಾಲದ ಸಂದರ್ಭ ಮನೆಗೆ ನೀರು ನುಗ್ಗುವುದು ಸೇರಿದಂತೆ ಹಲವಾರು ಅವಾಂ ತರಗಳು ಸೃಷ್ಟಿಯಾಗುತ್ತವೆ. ಇಂತಹ ಸಂದರ್ಭ ಅವುಗಳನ್ನು ನಗರಸಭೆ ಯಿಂದ ನಿಭಾಯಿಸಲು ಕ್ರಮಕೈಗೊಳ್ಳ ಲಾಗುತ್ತದೆ. ಈ ನಿಟ್ಟಿನಲ್ಲಿ ಜನರ ಸಹಕಾರ ಕೂಡ ಅಗತ್ಯ ಎಂದು ಅವರು ನುಡಿದರು.

ಬಿಜೆಪಿ ವಕ್ತಾರ ಮಹೇಶ್ ಜೈನಿ ಮಾತನಾಡಿ, ಈ ಹಲ್ಲೆ ಪ್ರಕರಣ ಸಂಬAಧ ಆದಷ್ಟು ಶೀಘ್ರ ಸೂಕ್ತ ಕಾನೂನು ಕ್ರಮಕೈಗೊಳ್ಳದಿದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳ ಲಾಗುವುದು ಎಂದು ತಿಳಿಸಿದರು.

ಕೊಡಗಿಗೆ ಅನ್ಯಾಯ

ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕೊಡಗನ್ನು ಕಡೆಗಣಿಸಲಾಗಿದೆ. ಕೊಡಗಿಗೆ ಏನನ್ನೂ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ರಾಬಿನ್ ದೇವಯ್ಯ ಆರೋಪಿಸಿದರು. ಕೊಡಗಿಗೆ ಪ್ರಾಮುಖ್ಯತೆ ನೀಡದೆ; ಅಲ್ಯಸಂಖ್ಯಾತರ ಓಲೈಕೆಗಾಗಿ ಬಜೆಟ್ ಮಂಡಿಸಲಾಗಿದೆ ಎಂದು ಮಹೇಶ್ ಜೈನಿ ದೂರಿದರು.

ಗೋಷ್ಠಿಯಲ್ಲಿ ಜೀವ ವೈವಿದ್ಯ ಮಂಡಳಿ ಮಾಜಿ ಅಧ್ಯಕ್ಷ ರವಿ ಕಾಳಪ್ಪ, ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.

ಎಸ್‌ಡಿಪಿಐ ಖಂಡನೆ

ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆ ಪ್ರಕರಣವನ್ನು ನಗರಸಭೆಯ ಎಸ್‌ಡಿಪಿಐ ಸದಸ್ಯರುಗಳಾದ ಅಮೀನ್ ಮೊಹಿಸಿನ್, ಮನ್ಸೂರ್, ಬಶೀರ್ ಅಹಮ್ಮದ್, ಮೇರಿ ವೇಗಸ್ ಹಾಗೂ ನೀಮಾ ಅರ್ಷಾದ್ ತೀವ್ರವಾಗಿ ಖಂಡಿಸಿದ್ದಾರೆ.

ಜನರಿAದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರನ್ನು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವುದು ಅಪರಾಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನಗರದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಕಾನೂ ನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕೆ ಹೊರತು ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ನಗರಸಭಾ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಎಸ್‌ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ.

ಕೊಡವಾಮೆರ ಕೊಂಡಾಟ ಸಂಘಟನೆ ಖಂಡನೆ

ನಗರಸಭೆ ಸದಸ್ಯ ಅಪ್ಪಣ್ಣ ಅವರ ಮೇಲೆ ಗುಂಪು ಹಲ್ಲೆ ಮಾಡಿರುವ ಘಟನೆಯನ್ನು ಕೊಡವಾಮೆರ ಕೊಂಡಾಟ ಸಂಘಟನೆ ಖಂಡಿಸಿದೆ. ಆರೋಪಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಂಡು, ಮುಂದೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕಿದೆ ಎಂದು ಆಗ್ರಹಿಸಿದೆ. ಇತ್ತೀಚಿನ ದಿನಗಳಲ್ಲಿ ಮಡಿಕೇರಿ ಸೇರಿದಂತೆ ಕೊಡಗಿನ ನಾನಾ ಭಾಗಗಳಲ್ಲಿ ಪುಡಿ ರೌಡಿಗಳ ಹಾವಳಿ ಅಧಿಕವಾಗಿದ್ದು, ಪೊಲೀಸ್ ಇಲಾಖೆ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಗಳೇ ಬೇರೆ ಬೇರೆ ಆಯಾಮಗಳಿಗೆ ತಿರುವು ಪಡೆದುಕೊಂಡು, ಜಿಲ್ಲೆಯಲ್ಲಿ ಗೊಂದಲ ಮತ್ತು ಅಶಾಂತಿಯ ವಾತಾವರಣ ಸೃಷ್ಟಿಯಾಗುವುದನ್ನು ತಡೆಯಬೇಕಾದರೆ, ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.