ಮಡಿಕೇರಿ, ಜು. ೭: ರಾಜ್ಯ ಬಜೆಟ್ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ವಿಶೇಷ ಅನುದಾನ ಘೋಷಣೆಯಾಗದೆ ಮತ್ತೊಮ್ಮೆ ಜಿಲ್ಲೆಯ ಜನತೆಗೆ ನಿರಾಸೆಯುಂಟಾಗಿದೆ.
ಯಾರೇ ಆಡಳಿತಕ್ಕೆ ಬರಲಿ ನಾವು ಮಾತ್ರ ಅನಾಥರು ಎಂಬAತಾಗಿದೆ ಕೊಡಗು ಜಿಲ್ಲೆಯ ಜನರ ಪರಿಸ್ಥಿತಿ.
ಎರಡು ದಶಕಗಳ ಬಳಿಕ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ಕೊಡಗಿಗೆ ವಿಶೇಷ ಅನುದಾನ, ಯೋಜನೆಗಳು ಘೋಷಣೆಯಾಗಬಹುದೆಂಬ ನಿರೀಕ್ಷೆಯಲ್ಲಿ ಕೊಡಗಿನ ಜನತೆ ಇದ್ದರು.
ಆದರೆ ಈ ಬಾರಿಯ ರಾಜ್ಯ ಬಜೆಟ್ ಜಿಲ್ಲೆಯ ಪಾಲಿಗೆ ನಿರಾಸೆಯುಂಟಾಗಿದೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು ಸರ್ಕಾರದ ಗಮನ ಸೆಳೆದು, ಜಿಲ್ಲೆಗೆ ವಿಶೇಷ ಅನುದಾನ ಒದಗಿಸಿಕೊಡುತ್ತಾರೆ ಎಂಬ ನಿರೀಕ್ಷೆಗಳು ಬಜೆಟ್ನಲ್ಲಿ ಹುಸಿಯಾಗಿವೆೆ.
ಕೊಡಗು ಜಿಲ್ಲೆಯ ಬಹುವರ್ಷಗಳ ಬಹುಬೇಡಿಕೆಯಾದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಕಾಫಿ ತೋಟಗಳಲ್ಲಿ ಅಳವಡಿಸಿರುವ ಹತ್ತು ಎಚ್.ಪಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್, ಕ್ರೀಡಾಂಗಣಗಳ ಅಭಿವೃದ್ಧಿ, ಕಾಫಿ ಬೆಳೆಗಾರರು ಸಮಸ್ಯೆಗೆ ಪರಿಹಾರ, ಕೊಡವ ಅಭಿವೃದ್ಧಿ ನಿಗಮಕ್ಕೆ ಅನುದಾನ, ಪ್ರವಾಸೋದ್ಯಮಕ್ಕೆ ಉತ್ತೇಜನ, ಕಾವೇರಿ ನದಿ ಅಭಿವೃದ್ಧಿಪಡಿಸಲು ಅನುದಾನ, ರಸ್ತೆಗಳ ಅಭಿವೃದ್ಧಿಗೆ ಅನುದಾನ ಈಗೆ ಹಲವಾರು ನಿರೀಕ್ಷೆಗಳು ಈ ಬಾರಿಯ ಬಜೆಟ್ನಲ್ಲಿ ಹುಸಿಯಾಗಿದೆ.
ಕಳೆದ ಬಾರಿಯ ಬಜೆಟ್ನಲ್ಲಿ ಬಿಜೆಪಿ ಸರ್ಕಾರ ಜಿಲ್ಲೆಗೆ ರಸ್ತೆಗಳ ಅಭಿವೃದ್ಧಿ ನೂರು ಕೋಟಿ ರೂ ಅನುದಾನ ನೀಡಲಾಗಿತ್ತು. ಕಾವೇರಿ ತವರಿನ ಜನರಿಗೆ ಮತ್ತೊಮ್ಮೆ ರಾಜ್ಯ ಆಯವ್ಯಯದಲ್ಲಿ ನಿರಾಸೆಯುಂಟಾಗಿದೆ. ಕನಸುಗಳು ಕೇವಲ ಕನಸಾಗಿ ಉಳಿದಿದೆ.
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕೂಗಿಗೆ ದೊರಕದ ಸ್ಪಂದನೆ!
ಈ ಬಾರಿಯ ಬಜೆಟ್ನಲ್ಲಿ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗುತ್ತೆ ಎಂದು ಬಲವಾಗಿ ನಿರೀಕ್ಷಿಸಲಾಗಿತ್ತು. ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂಥರ್ ಗೌಡ ಅವರು ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಈ ಸಂಬAಧ ಚರ್ಚೆ ನಡೆಸಿದರು.
ಜಿಲ್ಲೆಯ ಶಾಸಕದ್ವಯರ ಚುನಾವಣಾ ಪ್ರಣಾಳಿಕೆಯಲ್ಲಿ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಿಸುವುದಾಗಿ ಭರವಸೆ ನೀಡಿದ್ದರು. ಇದೀಗ ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿಲ್ಲ.
ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಲಾಗಿದೆ. ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆ ಸರ್ಕಾರದ ಸ್ಪಂದಿಸಿಲ್ಲ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ ಬಜೆಟ್ನಲ್ಲಿ ೪೫೦ ಕೋಟಿ ರೂ. ಮೀಸಲಿಡಲಾಗಿದೆ. ಅದೂ ಕೂಡಾ ಮುಂದುವರಿದ ಕಾಮಗಾರಿ.
ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ೪೫೦ ಬೆಡ್ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದೆಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ಕೊಡಗು ಜಿಲ್ಲೆಯ ಜಿಲ್ಲಾಸ್ಪತ್ರೆ ಮಡಿಕೇರಿಯಲ್ಲಿ ಈಗಾಗಲೇ ೪೫೦ ಬೆಡ್ ಸಾಮರ್ಥ್ಯವುಳ್ಳ ಆಸ್ಪತ್ರೆ ಕಟ್ಟಡ ಕಾಮಗಾರಿ ನಡೆಯುತ್ತಿದೆ.
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ರಾಜಕೀಯ ಪಕ್ಷಗಳ ಮತಬೇಟೆಗೆ ಸೀಮಿತ ಎಂದು ಮತ್ತೊಮ್ಮೆ ಈ ಬಾರಿಯ ಬಜೆಟ್ನಲ್ಲಿ ಸಾಬೀತಾಗಿದೆ.
ಬಜೆಟ್ನಲ್ಲಿ ಕೊಡಗಿಗೆ ಸಿಕ್ಕಿದ್ದು!
ರಾಷ್ಟಿçÃಯ ವಿಪತ್ತು ಉಪಶಮನ ನಿಧಿಯಡಿಯಲ್ಲಿ (ಓಆಒಈ) ನಿರ್ದಿಷ್ಟ ವಿಪತ್ತು ಅಪಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ಭೂಕುಸಿತ ಅಪಾಯ ತಗ್ಗಿಸುವಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಲವರ್ಧನೆ ಮುಂತಾದ ವಿಪತ್ತು ಪರಿಹಾರ ಕಾರ್ಯಕ್ರಮಗಳನ್ನು ಒಟ್ಟು ೭೨೧ ಕೋಟಿ ರೂ.ಗಳ ವೆಚ್ಚದಲ್ಲಿ ತೆಗದುಕೊಳ್ಳಲು ಉದ್ದೇಶಿಸಲಾಗಿದೆ. ಈ ಯೋಜನೆಯಲ್ಲಿ ಕೊಡಗು ಜಿಲ್ಲೆ ಕೂಡ ಒಳಪಟ್ಟಿದೆ.
ಕೊಡಗಿನ ಕಾಫಿಯನ್ನು ಇನ್ನಷ್ಟು ಪ್ರಚಾರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿAಗ್ ಮಾಡಲು ಕ್ರಮವಹಿಸಲಾಗುವುದೆಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್ ಅಪ್ ವ್ಯಾನ್ ಖರೀದಿಸಲು ಏಳು ಲಕ್ಷ ರೂ ವರೆಗಿನ ಸಾಲವನ್ನು ಶೇ ೦೪ ಬಡ್ಡಿ ದರದಲ್ಲಿ ವಿತರಿಸಲಾಗುವುದೆಂದು ಘೋಷಿಸಲಾಗಿದೆ.
ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಹಾಗೂ ವಿಪತ್ತು ನಿರ್ವಹಣೆ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ, ಕೊಡಗು, ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್ಸ್ಟಿçಪ್ಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ಘೋಷಿಸಲಾಗಿದೆ. ಇನ್ನುಳಿದಂತೆ ಕೊಡಗು ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳು ಘೋಷಣೆ ಯಾಗಿಲ್ಲ.
೧೦ ಹತ್ತು ಎಚ್.ಪಿ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಮಾಸಿಕ ಗರಿಷ್ಠ ೨೫೦ ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಘೋಷಣೆ ಮಾಡಲಾಗಿದೆ.
ಆದರೆ ಕೊಡಗು ಜಿಲ್ಲೆಯ ಬೆಳೆಗಾರರು ಕಳೆದ ಅನೇಕ ವರ್ಷಗಳಿಂದ ಕಾಫಿ ತೋಟಗಳ ಹತ್ತು ಎಚ್.ಪಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಪೂರೈಕೆ ಕೇವಲ ಕನಸಾಗಿ ಉಳಿದಿದೆ.
ಪ್ರವಾಸೋದ್ಯಮ ಮತ್ತು ಉದ್ಯಮ ವಲಯಗಳನ್ನು ಉತ್ತೇಜಿಸಲು ಹಾಗೂ ವಿಪತ್ತು ನಿರ್ವಹಣೆ ಸಮಯದಲ್ಲಿ ರಕ್ಷಣಾ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಹೊಸ ಏರ್ಸ್ಟಿçಪ್ಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದು ಘೋಷಿಸಲಾಗಿದೆ.
ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಿಗೆ ಅನ್ವಯವಾಗುವಂತೆ ಘೋಷಿಸಿರುವ ಯೋಜನೆಗಳನ್ನು ಬಿಟ್ಟರೆ, ಇನ್ನುಳಿದಂತೆ ಕೊಡಗು ಜಿಲ್ಲೆಗೆ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ.
ಕ್ರೀಡಾ ಜಿಲ್ಲೆ ಕೊಡಗಿನ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲು ಯೋಜನೆ ಘೋಷಣೆಯಾಗಿಲ್ಲ. ಪಕ್ಕದ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣ ನಿರ್ಮಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.
ಎರಡು ದಶಕಗಳ ಬಳಿಕ ಕಾಂಗ್ರೆಸ್ ಶಾಸಕರು ಗೆಲುವು ಸಾಧಿಸಿರುವುದರಿಂದ ಜಿಲ್ಲೆಗೆ ಬಜೆಟ್ನಲ್ಲಿ ಕೊಡುಗೆಗಳನ್ನು ನೀಡಿ, ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಕೊಡಗನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವ ಗೋಜಿಗೂ ಹೋಗಿಲ್ಲ.
ಸಚಿವ ಸ್ಥಾನವೂ ಇಲ್ಲ, ವಿಶೇಷ ಅನುದಾನವೂ ಇಲ್ಲದಂತಾಗಿದೆ.
ಒಟ್ಟಿನಲ್ಲಿ ಯಾರೇ ಗೆಲ್ಲಲಿ, ಸೋಲಲಿ, ಕೊಡಗು ಜಿಲ್ಲೆ ಮಾತ್ರ ಪ್ರತೀ ಬಜೆಟ್ನಲ್ಲಿ ಅನಾಥವಾಗಿ ಉಳಿದುಬಿಡುತ್ತದೆ ಎಂಬAತಾಗಿದೆ ಕೊಡಗಿನ ಪರಿಸ್ಥಿತಿ.
-ಕೆ.ಎಂ ಇಸ್ಮಾಯಿಲ್ ಕಂಡಕರೆ