ಮಡಿಕೇರಿ, ಜು. ೮: ಮಡಿಕೇರಿ ನ್ಯಾಯಾಲಯದ ವಕೀಲ ಕೃಷ್ಣಮೂರ್ತಿ ಅವರಿಗೆ ಅನಾಮಧೇಯರಿಂದ ಬೆದರಿಕೆ ಪತ್ರ ಬಂದಿರುವ ಪ್ರಕರಣವನ್ನು ಖಂಡಿಸಿರುವ ಮಡಿಕೇರಿ ವಕೀಲರ ಸಂಘವು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವAತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.
ವಕೀಲ ಕೃಷ್ಣಮೂರ್ತಿ ಅವರಿಗೆ ಅನಾಮಧೇಯರಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಈ ಪ್ರಕರಣಕ್ಕೆ ಸಂಬAಧಿಸಿದAತೆ ಕೃಷ್ಣಮೂರ್ತಿ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆದರಿಕೆ ಪತ್ರ ಬಂದಿರುವ ಪ್ರಕರಣದ ಬಗ್ಗೆ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ಅವರು ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿದ್ದು, ಪ್ರಕರಣವನ್ನು ಖಂಡಿಸಿದ್ದಾರೆ. ಅಂತೆಯೇ ಕೂಡಲೇ ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ಬೆದರಿಕೆ ಪತ್ರ ಬರೆದಿರುವ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಈ ಹಿಂದೆಯೂ ಕೃಷ್ಣಮೂರ್ತಿ ಅವರ ಕಾರ್ ಮೇಲೆ ಚೆಟ್ಟಳ್ಳಿ ಬಳಿ ಗುಂಡಿನ ದಾಳಿ ನಡೆದಿತ್ತು. ಆ ಪ್ರಕರಣದ ಆರೋಪಿಗಳನ್ನೂ ಕೂಡ ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಹೀಗಾಗಿ ನ್ಯಾಯವಾದಿ ಕೃಷ್ಣಮೂರ್ತಿ ಅವರ ಮೇಲೆ ಪದೇ ಪದೇ ನಡೆಯುತ್ತಿರುವ ಬೆದರಿಕೆ, ದಾಳಿಗಳನ್ನು ಹತ್ತಿಕ್ಕಲು ಎರಡೂ ಪ್ರಕರಣಗಳ ಆರೋಪಿಗಳನ್ನು ಬಂಧಿಸುವAತೆ ನಿರಂಜನ್ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.