ಕೂಡಿಗೆ, ಜು. ೧೦: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ವಾರ್ಡ್ನ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ತೆರವಾಗಿದ್ದ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗಿರುವುದರಿಂದ ಇಂದು ಎರಡು ನಾಮಪತ್ರಗಳು ಸಲ್ಲಿಕೆಯಾದವು.
ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರಕ್ಕೆ ಕೂಡ್ಲೂರು ಗ್ರಾಮದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಕೆ.ಪಿ. ಸುರೇಶ್ ಮತ್ತು ಬಿಜೆಪಿ ಪಕ್ಷದ ಬೆಂಬಲಿ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಕೆ ಮಾಡಿದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್ ಫಿಲೋಮಿನಾ, ಅರುಣ್ ರಾವ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಕೆ.ಕೆ. ಭೋಗಪ್ಪ ಮತ್ತಿತರರು ಹಾಜರಿದ್ದರು.
ಚುನಾವಣಾ ಅಧಿಕಾರಿಗಳಾಗಿ ಸುಂಟಿಕೊಪ್ಪ ನಾಡ ಕಚೇರಿಯ ಉಪ ತಹಶೀಲ್ದಾರ್ ಶಿವಪ್ಪ, ಕೂಡಿಗೆ ಡಯಟ್ ಪ್ರಥಮ ದರ್ಜೆ ಗುಮಾಸ್ತ ರಾಜೇಶ್ ಕಾರ್ಯನಿರ್ವಹಿಸಿದರು.