ಮಡಿಕೇರಿ, ಜು. ೯: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರದ ಕಾರ್ಯಕ್ರಮಗಳ ಸಂಬAಧ ಪ್ರತಿ ಪಂಚಾಯತಿಗಳ ನೋಟೀಸ್ ಬೋರ್ಡ್ನಲ್ಲಿ ಅಳವಡಿಸುವಂತೆ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಪ್ರಕರಣಗಳ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಸಮಿತಿ ಸದಸ್ಯರಾದ ಮುತ್ತಪ್ಪ ಅವರು ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹೆಮ್ಮನೆ ಗ್ರಾಮದಲ್ಲಿ ಸರ್ವೆ ನಂ. ೯೯೯/೩೯ ಬೀ ಪರಿಶಿಷ್ಟ ಜಾತಿ ಕುಟುಂಬಗಳಿಗೆ ೨೫ ಸೆಂಟ್ ಜಾಗವನ್ನು ಘೋಷಣೆ ಮಾಡಿತ್ತು, ಆದರೆ ಈ ಗ್ರಾಮದಲ್ಲಿ ೩ ತಿಂಗಳು ಕಳೆದರೂ ಸರ್ವೆ ಕಾರ್ಯ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು,
ಜಿಲ್ಲಾಧಿಕಾರಿ ಅವರು ಸರ್ವೆ ಕಾರ್ಯ ಯಾಕೆ ಪ್ರಾರಂಭ ಆಗಿಲ್ಲ, ಸೋಮವಾರದೊಳಗೆ ಸರ್ವೆ ಕಾರ್ಯ ಕೈಗೊಳ್ಳುವಂತೆ ಸಂಬAಧಪಟ್ಟ ತಹಶೀಲ್ದಾರ್ ಅವರಿಗೆ ಹೇಳಿದರು.
ಸಮಿತಿ ಸದಸ್ಯ ಪಳನಿ ಪ್ರಕಾಶ್ ಮಾತನಾಡಿ, ಪ್ರಾಕೃತಿಕ ವಿಕೋಪದಿಂದ ಹಲವು ಜನರು ಮನೆಗಳನ್ನು ಕಳೆದುಕೊಂಡಿದ್ದರು, ಅವರಿಗೆ ಮನೆ ನೀಡುಂತಾಗಬೇಕು ಎಂದರು.
ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ಸರ್ವೆ ನಂಬರ್ ೫೧೨/೧ ರಲ್ಲಿ ೦.೩೫ ಪೈಸಾರಿ ಜಾಗವನ್ನು ಅಂಬೇಡ್ಕರ್ ಭವನಕ್ಕೆ ಗುರುತಿಸಲಾಗಿದ್ದು, ಅದರ ಬಗ್ಗೆ ಪ್ರಸ್ತಾವನೆ ಬಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪೌರ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರಕ್ಕೆ ನೀಡುವಂತಹ ರೂ. ೩೦ ಹಣವನ್ನು ೫೦ ರೂಪಾಯಿಗಳಿಗೆ ಏರಿಕೆ ಮಾಡಿ ಗುಣಮಟ್ಟದ ಆಹಾರವನ್ನು ನೀಡುವಂತೆ ಹೇಳಿದರು.
ನಗರಸಭೆ ಪೌರಾಯುಕ್ತ ವಿಜಯ ಅವರು ಪೌರ ಕಾರ್ಮಿಕರಿಗೆ ಬೆಳಗ್ಗಿನ ತಿಂಡಿಯನ್ನು ಉತ್ತಮ ಗುಣಮಟ್ಟದಲ್ಲಿ ನೀಡಲಾಗುತ್ತಿದೆ. ಎಸ್ಸಿ ಮತ್ತು ಎಸ್ಟಿ ಮಕ್ಕಳಿಗೆ ನೀಡುವಂತಹ ಪುಸ್ತಕ ಹಾಗೂ ಸ್ಕಾಲರ್ ಶಿಪ್ ಅನ್ನು ಪಂಚಾಯಿತಿ ಮಟ್ಟದಲ್ಲಿ ನೀಡುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಮತ್ತು ಡಿಗ್ರಿ ಹಂತದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆನ್ಲೈನ್ ಮುಖಾಂತರ ಅರ್ಜಿ ಪಡೆದು ನೇರವಾಗಿ ಅವರ ಖಾತೆಗೆ ಹಣ ಹಾಗೂ ಲ್ಯಾಪ್ಟಾಪ್, ಟ್ಯಾಬ್ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಸಮಿತಿ ಸದಸ್ಯ ಪಿ.ಪಿ. ಸುಕುಮಾರ್, ಜಾಯ್ಸ್ ಮೆನೇಜಸ್, ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಕ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಡಿಡಿಪಿಐ ಸಿ. ರಂಗಧಾಮಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಮೋದ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್. ಹೊನ್ನೇಗೌಡ, ಪೌರಾಯುಕ್ತ ವಿಜಯ, ತಹಶೀಲ್ದಾರ್ ಎಸ್.ಎನ್. ನರಗುಂದ, ಬಿಸಿಎಂ ಅಧಿಕಾರಿ ಮಂಜುನಾಥ್ ಇತರರು ಇದ್ದರು.