ಸತೀಶ್ ಕಾಳೇಗೌಡ

ಕುಶಾಲನಗರ, ಜು. ೯: ಸುತ್ತಮುತ್ತಲಿನ ಪರಿಸರದಲ್ಲಿ ಗಿಡ- ಮರಗಳನ್ನು ಬೆಳೆಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಾಗಿದೆ ಎಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸತೀಶ್ ಕಾಳೇಗೌಡ ಹೇಳಿದರು.

ಕರ್ನಾಟಕ ಅರಣ್ಯ ಇಲಾಖೆಯ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕ, ಕುಶಾಲನಗರ ಕಾವೇರಿ ಪರಿಸರ ಬಳಗ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಕಾಲೇಜಿನ ಎನ್.ಎಸ್.ಎಸ್. ಘಟಕ ಹಾಗೂ ಸುಂಟಿಕೊಪ್ಪ ಜೆ.ಸಿ.ಐ. ಸಂಸ್ಥೆಯ ಸಹಯೋಗದಲ್ಲಿ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ‘ನಮ್ಮ ನಡೆ ಹಸಿರೆಡೆಗೆ’ ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ ೨೦೨೩ರ ಅಂಗವಾಗಿ ೩೫೦ ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಪರಿಸರವನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದ್ದು, ಎಲ್ಲರೂ ಜೊತೆಗೂಡಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು.

ತಮ್ಮ ಕಾಲೇಜು ಆವರಣದಲ್ಲಿ ಕೈಗೊಂಡಿರುವ ಹಸರೀಕರಣ ಕಾರ್ಯಕ್ಕೆ ಪ್ರಾಂಶುಪಾಲ ಕಾಳೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

`ಪರಿಸರ ಸಂರಕ್ಷಣೆ' ಕುರಿತು ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞೆ ಬೋಧಿಸಿದರು. ನಾವು ಅರಣ್ಯ ಸಂರಕ್ಷಣೆ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗಾಗಿ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಸಂಕಲ್ಪ ತೊಡಬೇಕು ಎಂದರು. ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ. ಶಿವರಾಂ ಮಾತನಾಡಿ, ಅರಣ್ಯ ಇಲಾಖೆಯ ವತಿಯಿಂದ ಸಂಘ-ಸAಸ್ಥೆಗಳು, ವಿವಿಧ ಇಲಾಖೆಗಳು ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಗಿಡಗಳ ನಿರ್ವಹಣೆಯನ್ನು ಪ್ರತಿಯೊಬ್ಬರೂ ಮಾಡಬೇಕಾಗಿದೆ ಎಂದರು.

ಕಾವೇರಿ ಪರಿಸರ ಬಳಗದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸುವ ಮೂಲಕ ಅರಣ್ಯ ಪ್ರದೇಶ ವೃದ್ಧಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್. ವೆಂಕಟ ನಾಯಕ್, ಪರಿಸರ ಘೋಷಣೆಗಳ ಮೂಲಕ ವನ ಮಹೋತ್ಸವದ ಸಂದೇಶ ತಿಳಿಸಿದರು.

ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಜಿ. ಜಯಣ್ಣ, ಕಾಲೇಜಿನ ರಿಜಿಸ್ಟಾçರ್ ಮೇರಿ, ಉಪನ್ಯಾಸಕರಾದ ಟಿ. ರಾಜಣ್ಣ, ಉಮಾಪತಿ, ವಿಜಯ್, ಮಮತ, ಸ್ಮಿತ, ಡಿಆರ್‌ಎಫ್‌ಓ ಕೆ.ಎನ್. ದೇವಯ್ಯ, ಶ್ರವಣಕುಮಾರ್ ವಿಭೂತಿ, ಚೇತನ್, ಗಸ್ತು ವನ ಪಾಲಕ ವಿ.ಎಸ್. ಮಂಜೇಗೌಡ, ಸಿದ್ದರಾಮ ನಾಟೀಕರ್, ದಿನೇಶ್, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿ ಇದ್ದರು. ಇತರರು ಇದ್ದರು.

ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಬAಧಿಸಿದAತೆ ವಿವಿಧ ಪರಿಸರ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಪರಿಸರ ಜಾಗೃತಿ ಮೂಡಿಸಲಾಯಿತು.