ಪ್ರವಾಹದಿಂದ ಕೊಚ್ಚಿಹೋಗಿದ್ದ ಸೈನಿಕರ ಮೃತದೇಹಗಳು ಪತ್ತೆ

ಜಮ್ಮು, ಜು. ೯: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳು ಪತ್ತೆಯಾಗಿವೆ. ಸೇನಾ ಸಿಬ್ಬಂದಿ ಶನಿವಾರ ಸುರನ್‌ಕೋಟೆ ಪ್ರದೇಶದ ಡೋಗ್ರಾ ನಾಲೆಯನ್ನು ದಾಟುತ್ತಿದ್ದಾಗ ಬಲವಾದ ಪ್ರವಾಹಕ್ಕೆ ಸಿಲುಕಿ ಅವರು ಕೊಚ್ಚಿಹೋಗಿದ್ದರು. ಶನಿವಾರ ರಾತ್ರಿ ನೈಬ್ ಸುಬೇದಾರ್ ಕುಲದೀಪ್ ಸಿಂಗ್ ಅವರ ಮೃತದೇಹವನ್ನು ಹೊಳೆಯಿಂದ ಹೊರತೆಗೆಯಲಾಗಿದ್ದು, ಎರಡನೇ ಯೋಧನ ಮೃತದೇಹವನ್ನು ಭಾನುವಾರ ಹೊರತೆಗೆಯಲಾಗಿದೆ. ಮೃತರಲ್ಲಿ ಒಬ್ಬರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರನಾಥ ಯಾತ್ರೆ ವೇಳೆ ಭೂಕುಸಿತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು

ಗದಗ, ಜು. ೯: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ ೮೩ ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆAದು ತಿಳಿದುಬಂದಿದೆ. ಈ ಪೈಕಿ ೨೩ ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ ಕಳುಹಿಸಿದ್ದು, ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳದಲ್ಲಿ ೧,೦೦೦ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಈ ಪೈಕಿ ೮೩ ಮಂದಿ ಕರ್ನಾಟಕದವರು ಎಂದು ಹೇಳಲಾಗುತ್ತಿದೆ. ಇವರೆಲ್ಲರೂ ಅಮರನಾಥದ ಪಂಚತಾರ್ನಿ ಮಿಲಿಟರಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆದಿದ್ದಾರೆಂದು ತಿಳಿದುಬಂದಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಪ್ರಾಧಿಕಾರದ ಆಯುಕ್ತ ಪಿ. ಸುನೀಲ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಉತ್ತರಾಖಂಡಕ್ಕೆ ತೆರಳುತ್ತಿದ್ದು, ಪರಿಸ್ಥಿತಿ ಅವಲೋಕನ ನಡೆಸಲಿದೆ ಎಂದು ವರದಿಗಳು ತಿಳಿಸಿವೆ. ಈ ಕುರಿತು ಮಾಹಿತಿ ನೀಡಿರುವ ಸುನೀಲ್ ಕುಮಾರ್ ಅವರು, ಸ್ಥಳಕ್ಕೆ ತೆರಳುವ ಅಧಿಕಾರಿಗಳು, ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಹಾಗೂ ಅಮರನಾಥ ದೇಗುಲ ಮಂಡಳಿಯ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಮಳೆಗೆ ೨೧ ಮಂದಿ ಬಲಿ-೪೭ಕ್ಕೂ ಹೆಚ್ಚು ಜಾನುವಾರು ಸಾವು

ಕಾರವಾರ, ಜು. ೯: ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ೨೧ ಮಂದಿ ಬಲಿಯಾಗಿದ್ದು, ೪೦ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬAಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ, ಮೃತರ ಕುಟುಂಬಕ್ಕೆ ತಲಾ ರೂ. ೫ ಲಕ್ಷ ಪರಿಹಾರ ವಿತರಣೆ ಮಾಡಿದರು.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್

ಭೋಪಾಲ್, ಜು. ೯: ರಾಷ್ಟಿçÃಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಮುಖ್ಯಸ್ಥ ಗುರು ಗೋಲ್ವಾಲ್ಕರ್ ವಿರುದ್ಧದ ಹೇಳಿಕೆಗೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಇಂದೋರ್‌ನ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದಿಗ್ವಿಜಯ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ೧೫೩ ಎ, ೪೬೯, ೫೦೦ ಮತ್ತು ೫೦೫ ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಶನಿವಾರ ಪೋಸ್ಟರ್ ಒಂದನ್ನು ಟ್ವೀಟ್ ಮಾಡಿದ್ದು, ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರು ಮತ್ತು ರಾಷ್ಟಿçÃಯ ನೀರು, ಅರಣ್ಯ ಮತ್ತು ನೆಲದ ಮೇಲಿನ ಗುರು ಗೋಲ್ವಾಲ್ಕರ್ ಜಿ ಅವರ ಚಿಂತನೆಗಳು ಹೀಗಿದ್ದವು ಎಂದು ಶೀರ್ಷಿಕೆ ನೀಡಿದ್ದಾರೆ. ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರಿಗೆ ಸಮಾನವಾದ ಹಕ್ಕುಗಳನ್ನು ನೀಡುವುದಕ್ಕಿಂತ ಬ್ರಿಟಿಷ್ ಆಳ್ವಿಕೆಯಲ್ಲಿ ಗುಲಾಮನಾಗಿ ನಾನು ಬದುಕಲು ಬಯಸುತ್ತೇನೆ ಎಂದಿರುವ ಗೋಲ್ವಾಲ್ಕರ್ ಹೇಳಿಕೆಯನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ’

ಬೆಂಗಳೂರು, ಜು. ೯: ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ 'ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ, ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದರು.

ಲಡಾಕ್‌ನಲ್ಲಿ ಹಿಮಪಾತ, ಭಾರಿ ಮಳೆ

ಲೇಹ್, ಜು. ೯: ಅಕಾಲಿಕ ಹಿಮಪಾತ ಮತ್ತು ಭಾರಿ ಮಳೆಯಿಂದಾಗಿ ಲಡಾಖ್‌ನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಲಾಮಯೂರು ಬಳಿಯಲ್ಲಿ ಲೇಹ್-ಕಾರ್ಗಿಲ್-ಶ್ರೀನಗರ ರಾಷ್ಟಿçÃಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಹೆದ್ದಾರಿಯನ್ನು ಮುಚ್ಚಲಾಗಿದೆ. ಎರಡು ದಿನಗಳ ಮಳೆಯ ನಂತರ ಲೇಹ್ ಮತ್ತು ಕಾರ್ಗಿಲ್ ಎರಡೂ ಜಿಲ್ಲೆಗಳಲ್ಲಿನ ಎತ್ತರದ ಪ್ರದೇಶಗಳಲ್ಲಿ ರಾತ್ರಿಯಿಡೀ ಅಕಾಲಿಕ ಹಿಮಪಾತ ಉಂಟಾಯಿತು. ಕಾರ್ಗಿಲ್‌ನ ರಂಗ್ಡಮ್ ಗ್ರಾಮವು ಸುಮಾರು ಮೂರು ಇಂಚುಗಳಷ್ಟು ಹಿಮಪಾತಕ್ಕೆ ಸಾಕ್ಷಿಯಾಗಿದೆ. ಪೆನ್ಸಿಲಾ, ಝನ್ಸ÷್ಕರ್ ಮತ್ತು ಕಾರ್ಗಿಲ್ ಸುತ್ತಮುತ್ತಲಿನ ಬೆಟ್ಟಗಳು ಸೇರಿದಂತೆ ಇತರ ಪ್ರದೇಶಗಳು ಸಹ ಹಿಮದ ಹೊದಿಕೆಯಿಂದ ಆವೃತವಾಗಿವೆ.

ಪ್ರಿಯತಮನೊಂದಿಗೆ ಓಡಿ ಹೋದ ೬ ಮಕ್ಕಳ ತಾಯಿ

ಪಾಟ್ನಾ, ಜು. ೯: ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಆರು ಮಕ್ಕಳ ತಾಯಿಯೊಬ್ಬರು ತನ್ನ ಪ್ರಿಯಕರನೊಂದಿಗೆ ಓಡಿಹೋಗಿದ್ದು, ಆಕೆಯ ಪತಿ ದೂರು ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಒಬ್ಬ ಮಗಳ ಮದುವೆ ಮಾಡಿದ್ದರು. ಆಕೆ ಓಡಿಹೋದ ನಂತರ, ಮಹಿಳೆಯ ಪತಿ ಭಗವಾನ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಮತ್ತು ತನ್ನ ಹೆಂಡತಿಯನ್ನು ಪತ್ತೆಹಚ್ಚುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸಂತ್ರಸ್ತ ದಾಖಲಿಸಿದ ಎಫ್‌ಐಆರ್‌ನಲ್ಲಿ ತನ್ನ ಪತ್ನಿ ಯಾರೊಂದಿಗೆ ಓಡಿಹೋಗಿದ್ದಾಳೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾನೆ. ಮಹಿಳೆಯ ಮೊಬೈಲ್ ಫೋನ್ ಆನ್ ಆಗಿದ್ದರೂ ಪತಿ ಮತ್ತು ತನ್ನ ಮಕ್ಕಳು ಮಾಡುವ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಕೆಲವೊಮ್ಮೆ, ಪುರುಷನಿಂದ ಫೋನ್ ಕರೆ ಸ್ವೀಕರಿಸಿ ನಿಂದನೀಯ ಪದಗಳನ್ನು ಬಳಸುತ್ತಿದ್ದರು ಎಂದು ದೂರಿನಲ್ಲಿ ವ್ಯಕ್ತಿ ಹೇಳಿದ್ದಾರೆ.

ಮಾಜಿ ಶಾಸಕ ನಿಂಬಣ್ಣವರ ವಿಧಿವಶ

ಧಾರವಾಡ, ಜು. ೯: ಧಾರವಾಡ ಜಿಲ್ಲೆಯ ಕಲಘಟಗಿ ಮಾಜಿ ಶಾಸಕ ಸಿಎಂ ನಿಂಬಣ್ಣವರ ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ ೧೯೪೭(೭೬) ರಲ್ಲಿ ಜನಿಸಿದ್ದ ಅವರು ಕಳೆದ ೨೩ ವರ್ಷಗಳಿಂದ ರೈತರ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರ ಕೋರಿ ನಿರಂತರ ಹೋರಾಟ ಕೈಗೊಂಡು ಯಶಸ್ವಿಯಾಗಿದ್ದರು.

ಜೈನ ಮುನಿಗಳ ಹಂತಕರ ವಿರುದ್ಧ ಕಠಿಣ ಕ್ರಮ : ಉಪಮುಖ್ಯಮಂತ್ರಿ

ಬೆAಗಳೂರು, ಜು. ೯: ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.