ಅನ್ನಭಾಗ್ಯ - ಹಣ ವರ್ಗಾವಣೆಗೆ ಚಾಲನೆ
ಬೆಂಗಳೂರು, ಜು. ೧೦: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅತ್ಯಂತ ಪ್ರಮುಖವಾದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ ೫ ಕೆ.ಜಿ ಅಕ್ಕಿ ಹಾಗೂ ತಲಾ ೧೭೦ ರೂ. ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಅನ್ನಭಾಗ್ಯ' ಯೋಜನೆಯಡಿ ೧೭೦ ರೂಪಾಯಿ ನಗದು ವರ್ಗಾವಣೆಗೆ ಚಾಲನೆ ನೀಡಿದರು. ನಗದು ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಮುಂದಿನ ೧೫ ದಿನಗಳಲ್ಲಿ ೧.೨೮ ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ ೧೦ ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ ಎಂದರು.
ಉತ್ತರ ಭಾರತದಲ್ಲಿ ಮಳೆರಾಯನ ಆರ್ಭಟ
ನವದೆಹಲಿ, ಜು. ೧೦: ಭಾರೀ ಮಳೆಗೆ ಉತ್ತರ ಭಾರತದಲ್ಲಿ ತತ್ತರಿಸಿದ್ದು, ಕಳೆದ ಮೂರು ದಿನಗಳಲ್ಲಿ ೨೮ಕ್ಕೂ ಹೆಚ್ಚು ಮಂದಿ ಮಳೆ ಅನಾಹುತಕ್ಕೆ ಬಲಿಯಾಗಿದ್ದಾರೆ. ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ರಾಷ್ಟç ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿದೆ. ದೆಹಲಿಯ ಯಮುನಾ ಸೇರಿದಂತೆ ಉತ್ತರ ಭಾರತದ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. ಉತ್ತರ ಭಾರತದಲ್ಲಿ ಹಲವು ನಗರಗಳು ಮತ್ತು ಪಟ್ಟಣಗಳಲ್ಲಿ, ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಿಮಾಚಲ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಮನೆಗಳಿಗೆ ಹಾನಿಯಾಗಿದೆ ಮತ್ತು ಹಲವಾರು ಜನರು ಸಾವನ್ನಪ್ಪಿದ್ದಾರೆ.
ಕಸ್ತೂರಿರಂಗನ್‌ಗೆ ಹೃದಯಾಘಾತ
ಬೆಂಗಳೂರು, ಜು. ೧೦: ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದೆ. ೮೩ ವರ್ಷದ ಕಸ್ತೂರಿರಂಗನ್ ಅವರನ್ನು ವಿಮಾನದ ಮೂಲಕ ಕೊಲಂಬೊದಿAದ ಬೆಂಗಳೂರಿಗೆ ಕರೆತರಲಾಯಿತು. ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಅವರನ್ನು ದಾಖಲಿಸಲಾಯಿತು. ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿರಂಗನ್ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಅಮರನಾಥದಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತ
ಬೆಂಗಳೂರು, ಜು. ೧೦: ಅಮರನಾಥ ಯಾತ್ರೆಗೆ ತೆರಳಿ ಭಾರೀ ಮಳೆ, ಭೂಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ೩೦೦ ಮಂದಿ ಕನ್ನಡಿಗರು ಸುರಕ್ಷಿತರಾಗಿದ್ದು, ಶೀಘ್ರದಲ್ಲೇ ತವರಿಗೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ. ಜಮ್ಮು-ಕಾಶ್ಮೀರದಲ್ಲಿ ಸುರಿದಿರುವ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು, ರಸ್ತೆಗಳು ಹಾಳಾಗಿವೆ. ಹೀಗಾಗಿ ಯಾತ್ರೆಗೆ ತೆರಳುತ್ತಿದ್ದವರು, ವಾಪಸ್ ಬರುತ್ತಿದ್ದವರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ ೩೦೦ ಮಂದಿ ಕನ್ನಡಿಗರೂ ಇದ್ದರೂ ಎಂದು ಹೇಳಲಾಗುತ್ತಿತ್ತು. ರಾಜ್ಯದ ಅಧಿಕಾರಿಗಳು, ಜಮ್ಮು-ಕಾಶ್ಮೀರದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸರು ಮತ್ತು ಸೇನೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಇದರಂತೆ ಇಂದು ಬೆಳಿಗ್ಗೆ ಹವಾಮಾನ ತಿಳಿಗೊಂಡಿದ್ದು, ಮಳೆ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ. ಇದೀಗ ಒಂದಷ್ಟು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಶರದ್ ಬಣದ ಶಾಸಕ ಅಜಿತ್ ಬಣಕ್ಕೆ ಸೇರ್ಪಡೆ
ಮುಂಬೈ, ಜು. ೧೦: ಮಹಾರಾಷ್ಟç್ರದ ಸತಾರಾ ಜಿಲ್ಲೆಯ ವಾಯಿ ಕ್ಷೇತ್ರದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಶಾಸಕ ಮಕರಂದ್ ಪಾಟೀಲ್ ಅವರು ಸೋಮವಾರ ಪಕ್ಷದ ಹಿರಿಯ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿರುವುದಾಗಿ ಹೇಳಿದ್ದಾರೆ. ಆರ್ಥಿಕ ಬಿಕ್ಕಟ್ಟಿನಲ್ಲಿರುವ ತಮ್ಮ ಕ್ಷೇತ್ರದಲ್ಲಿನ ಎರಡು ಸಕ್ಕರೆ ಕಾರ್ಖಾನೆಗಳನ್ನು ಉಳಿಸಲು ಮತ್ತು ವಾಯಿ ಕ್ಷೇತ್ರದ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಸಂಬAಧಿತ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯೊಂದಿಗೆ ಅಜಿತ್ ಪವಾರ್ ಬಣ ಸೇರಲು ನಿರ್ಧರಿಸಿದ್ದೇನೆ ಎಂದು ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್‌ನಲ್ಲಿ ಚಾಕು ಪತ್ತೆ
ಬೆಂಗಳೂರು, ಜು. ೧೦: ವಿಧಾನಸೌಧದ ಪೂರ್ವ ಬಾಗಿಲಿನ ಮೂಲಕ ಒಳಪ್ರವೇಶಿಸಲು ಮುಂದಾದ ಮಹಿಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿ ಚಾಕು ಪತ್ತೆಯಾಗಿದೆ. ಸ್ಕಾö್ಯನಿಂಗ್ ವೇಳೆ ಬ್ಯಾಗ್ ಒಳಗೆ ಚಾಕು ಇರುವುದನ್ನು ಸ್ಕಾö್ಯನಿಂಗ್ ಸ್ಕಿçÃನ್‌ನಲ್ಲಿ ಭದ್ರತಾ ಸಿಬ್ಬಂದಿಯು ವೀಕ್ಷಿಸಿದ್ದಾರೆ. ಕೂಡಲೇ ಆ ಬ್ಯಾಗ್ ಅನ್ನು ಹೊರಗೆಳೆದು ಅದರಲ್ಲಿದ್ದ ವಸ್ತುಗಳನ್ನು ಹೊರಹಾಕಿ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಮಹಿಳೆಯನ್ನೂ ಸಹ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ. ಮಹಿಳೆಯ ಕುರಿತ ವಿವರಗಳು ಬಹಿರಂಗವಾಗಿಲ್ಲ.
ಬಹುಕೋಟಿ ಜಿಎಸ್‌ಟಿ ಹಗರಣ : ಮೂವರ ಬಂಧನ
ನೋಯ್ಡಾ, ಜು. ೧೦: ಸರ್ಕಾರಕ್ಕೆ ಆದಾಯ ನಷ್ಟ ಉಂಟು ಮಾಡಿದ ಬಹುಕೋಟಿ ಜಿಎಸ್‌ಟಿ ಹಗರಣಕ್ಕೆ ಸಂಬAಧಿಸಿದAತೆ ನೋಯ್ಡಾ ಪೊಲೀಸರು ಸೋಮವಾರ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ೧೮ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಗರಣವು ನಕಲಿ ಆಧಾರ್ ಕಾರ್ಡ್ಗಳ ಆಧಾರದ ಮೇಲೆ ಸಾವಿರಾರು ಬೋಗಸ್ ಕಂಪನಿಗಳನ್ನು ಸೃಷ್ಟಿಸಿ, ಅದರಿಂದ ನಕಲಿ ಇನ್‌ವಾಯ್ಸ್ಗಳನ್ನು ಸಿದ್ಧಪಡಿಸಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್(ಐಟಿಸಿ) ಕ್ಲೆöÊಮ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಸೆಕ್ಟರ್ ೨೦ ಪೊಲೀಸ್ ಠಾಣೆಯು ಜಿಎಸ್‌ಟಿ ವಂಚನೆ ಕುರಿತು ತನಿಖೆ ನಡೆಸುತ್ತಿದೆ. ಪೊಲೀಸರು ಈ ಪ್ರಕರಣದಲ್ಲಿ ಬೇಕಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಮಿತ್ ಅಲಿಯಾಸ್ ಮಾಂಟಿ (೪೨), ಅಜಯ್ ಅಲಿಯಾಸ್ ಮಿಂಟು(೪೧) ಮತ್ತು ಮಹೇಶ್ ಎಂದು ಗುರುತಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ(ನೋಯ್ಡಾ) ಶಕ್ತಿ ಮೋಹನ್ ಅವಸ್ತಿ ಅವರು ಹೇಳಿದ್ದಾರೆ.