ಮಡಿಕೇರಿ, ಜು. ೧೦: ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲೂö್ಯ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾA, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲಿ ಮಾಡಲು ಅವಕಾಶವಿದೆ.

ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ. ಪ್ರಾದೇಶಿಕ ಕೇಂದ್ರ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಟ್ಟಡ, ಮಡಿಕೇರಿ-೫೭೧೨೦೧, ದೂ.ಸಂ.೦೮೨೭೨-೨೦೧೧೪೭/ ೮೦೭೩೩೪೨೩೧೦/ ೯೧೪೧೯೩೮೮೦೩/ ೮೨೯೬೨೧೫೭೧೪/ ೯೬೧೧೩೨೦೧೯೧ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.