ಗೋಣಿಕೊಪ್ಪಲು, ಜು. ೧೦: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ, ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣನವರ ಹುಟ್ಟು ಹಬ್ಬ ಆಚರಣೆ ಅಂಗವಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮುಂದಾಳತ್ವದಲ್ಲಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ನಂತರ ಸ್ಥಳೀಯ ಉಮಾಮಹೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಶಿವಾಜಿ, ಪಕ್ಷದ ಹಿರಿಯ ಮುಖಂಡರಾದ ಅಬ್ದುಲ್ ಸಮ್ಮದ್, ಗ್ರಾ.ಪಂ. ಸದಸ್ಯರಾದ ಎಂ.ಮAಜುಳಾ, ದ್ಯಾನ್ ಸುಬ್ಬಯ್ಯ, ಶರತ್ ಕಾಂತ್, ಪಕ್ಷದ ಪ್ರಮುಖರಾದ ಯಾಶ್ಮಿನ್, ಧನಲಕ್ಷಿö್ಮ, ಧನ್ಯ, ಸೇರಿದಂತೆ ಆಸ್ಪತ್ರೆಯ ವೈದ್ಯರಾದ ಡಾ.ಸುರೇಶ್ ಹಾಜರಿದ್ದರು.